13/12/2025
IMG_20250708_120847_copy_2040x918_1

ಬೆಳಗಾವಿ-08 : ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು ಪ್ರತಿಭಟನೆಯನ್ನು ನಡೆಸಲಾಗುತ್ತಿದ್ದು, ಅದಕ್ಕೆ ಬೆಂಬಲ ನೀಡಲು ಬೆಳಗಾವಿಯ ಮಹಾನಗರ ಪಾಲಿಕೆಯ ಮುಂದೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಬೃಹತ್ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ನೌಕರರಿಗೆ 7ನೇ ವೇತನ ಆಯೋಗ ಸೌಲಭ್ಯವನ್ನು ಪಾಲಿಕೆ ನೌಕರಸ್ಥರಿಗೂ ಜಾರಿ ಮಾಡುವುದು ಹಾಗೂ ರಾಜ್ಯ ಆರ್ಥಿಕ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ, ಪಾಲಿಕೆ ನೇಮಕಾತಿ ನಿಯಮಾವಳಿ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು.

ಕೆ.ಜಿ ಐಡಿ, ಜಿ ಪಿ ಎಫ್ ಸೌಲಭ್ಯಗಳನ್ನು ಪಾಲಿಕೆ ನೌಕರರಿಗೆ ವಿಸ್ತರಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ ಆರೋಗ್ಯ, ಆರೋಗ್ಯ ಸಂಜೀವಿನಿ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ವಿಸ್ತರಿಸಲು ಆಗ್ರಹಿಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಆಯೋಜಿಸಬೇಕೆಂದು ಮನವಿ ಮಾಡಿದರು.

ಮಹಾನಗರ ಪಾಲಿಕೆ ಅಧಿಕಾರಿ ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದಲ್ಲಿ ಹುದ್ದೆಯಲ್ಲೆ ಮುಂಬಡ್ತಿ ವಂಚಿತರಾಗಿರುವುದರಿಂದ ಕೂಡಲೇ ವಿವಿಧ ಹುದ್ದೆಗಳಿಗೆ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅನೇಕರು ಪ್ರತಿಭಟನೆ ಯಲ್ಲಿ ಉಪಸ್ಥಿತರಿದ್ದರು.

error: Content is protected !!