12/12/2025
IMG-20250717-WA0005

ಅಥಣಿ-17: ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ರವರು ಗುರುವಾರದಂದು ಅಥಣಿ ತಾಲೂಕಿನ ಕನ್ನಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಕಾರ್ಯಾತ್ಮಕ ನಳ ಸಂಪರ್ಕ ಕುರಿತು ಸ್ಥಳೀಯ ಫಲಾನುಭವಿಗಳ ಜೊತೆ ಚರ್ಚೆಮಾಡಿ ಮಾಹಿತಿ ಪಡೆದುಕೊಂಡರು. ನಂತರ ಗ್ರಾಮ ಪಂಚಾಯತಿಯ ಮುಂದೆ 15 ನೇ ಹಣಕಾಸು ಯೋಜನೆಯಡಿ ನಿರ್ಮಾಣವಾಗುತ್ತಿರುವ ಉದ್ಯಾನವನ ವೀಕ್ಷಣೆ ಮಾಡಿದರು. ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯ ಜೊತೆ ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯ ಘಟಕಾಂಶಗಳ ಪ್ರಗತಿ, ಹೆಸ್ಕಾಂ ಬಿಲ್ಲುಗಳು ಪುನರವಿಮರ್ಶೆ,ಹೊಸ ಗ್ರಂಥಾಲಯಗಳ ಬಗ್ಗೆ ಚರ್ಚಿಸಿದರು. ಕನ್ನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆಗೆ ಬೇಟಿ ನೀಡಿ ಮಕ್ಕಳ ಜೊತೆ ಬಿಸಿಯೂಟ ಹಾಗೂ ಸಮವಸ್ತ್ರ ಬಗ್ಗೆ ಚರ್ಚೆ ಮಾಡಿದರು.

ನಂತರ ಐಗಳಿ ಹಾಗೂ ಪಡತರವಾಡಿ ಗ್ರಾಮಗಳಲ್ಲಿನ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಭೇಟಿ ನೀಡಿ ಯೋಜನೆ ಬಗ್ಗೆ ಸಾರ್ವಜನಿಕರೊಡನೆ ಚರ್ಚೆ ಮಾಡಿ ಮಾಹಿತಿ ಪಡೆದುಕೊಂಡರು. ನಂತರ ಕಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ದಬ್ಬದಾಬಟ್ಟಿ ಗ್ರಾಮದ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತರುವಾತ ರಡ್ಡೇರಹಟ್ಟಿ ಗ್ರಾಮಕ್ಕೆ ತೆರಳಿ ಅಲ್ಲಿಯೂ ಸಹ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಸಮೃದ್ದಿ ಸಂಜೀವಿನಿ ವನ ಧನ ವಿಕಾಸ ಕೇಂದ್ರಕ್ಕೆ ಭೇಟಿ ಮಾಡಿ ವಿಕಾಸ ಕೇಂದ್ರದ ಪದಾಧಿಕಾರಿಗಳಿಗೆ ಹಾಗೂ ಎನ್ ಆರ್ ಎಲ್ ಎಮ್ (NRLM) ಸಿಬ್ಬಂದಿಯವರೆಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಮುಂದುವರೆದು, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರು ಕಾಗವಾಡ ತಾಲೂಕಿನ ಮೋಳೆ, ಕೆಂಪವಾಡ, ಮಂಗಸೂಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದರು.

ಮೋಳೆ ಗ್ರಾಮದ ದೇವರಡ್ಡಿ ತೋಟ ಮತ್ತು ಕೆಂಪವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಕೌಲಗುಡ್ಡ ಹಾಗೂ ಮಂಗಸೂಳಿ ಗ್ರಾಮದಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಂ ಕಾಮಗಾರಿಗಳಿಗೆ ಭೇಟಿ ನೀಡಿ ಫಲಾನುಭವಿಗಳೊಂದಿಗೆ ಚರ್ಚಿಸಿದರು. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನರೊಂದಿಗೆ ಸಂವಾದ ನಡಿಸಿದರು. ಪ್ರಸ್ತುತ ಅವಧಿ ಪೂರ್ಷ ಮಳೆಯಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಇಲ್ಲ ಅಂತಾ ಅಲ್ಲಿನ ಗ್ರಾಮಸ್ಥರು ಮಾನ್ಯರಿಗೆ ತಿಳಿಸಿದರು.

ಬಳಿಕ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಕಾರ್ಯಾತ್ಮಕ ನಳ ಸಂಪರ್ಕದ ಕುರಿತು ಫಲಾನುಭವಿಗಳ ಜೊತೆ ಚರ್ಚೆ ಮಾಡಿದರು. ಮಂಗಸೂಳಿ ಗ್ರಾಮದಲ್ಲಿನ ನಲ್ಲಿಗಳಿಗೆ ಮೀಟರ್ ಅಳವಡಿಸುವಂತೆ ಹಾಗೂ ಕೆಲವು ನಲ್ಲಿ ಸೋರಿಕೆಯಾಗುತ್ತಿದ್ದು, ಅವುಗಳನ್ನು 15 ದಿನಗಳ ಒಳಗಾಗಿ ದುರಸ್ತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿಗದಿತ ಅವಧಿಯಲ್ಲಿ ದುರಸ್ತಿ ಮಾಡದೇ ಹೋದಲ್ಲಿ ಸಹಾಯವಾಣಿ ನಂಬರಿಗೆ ಕರೆ ಮಾಡಲು ಸಾರ್ವಜನಿಕರಿಗೆ ಮಾನ್ಯರು ತಿಳಿಸಿದರು.
ಶೀರಗುಪ್ಪಿ ಗ್ರಾಮ ಪಂಚಾಯತ ಮತ್ತು ಶಹಾಪುರ ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ನೂತನ ಜಾಕ್ ವೆಲ್ ನಿರ್ಮಾಣ ಮಾಡಿಕೊಡುವಂತೆ ಹಾಗೂ ನರೇಗಾ ಯೋಜನೆಯಡಿ ಹೆಚ್ಚುವರಿ ಕ್ರಿಯಾ ಯೋಜನೆಗೆ ಅವಕಾಶ ನೀಡುವಂತೆ ಶಹಾಪುರ ಗ್ರಾಮಸ್ಥರು ಮಾನ್ಯರಿಗೆ ಮನವಿ ಮಾಡಿದರು. ಬಳಿಕ ಶಿರಗುಪ್ಪಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಮತ್ತು ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣಾ ವಾಲಿ, ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಚಿಕ್ಕೋಡಿ ಪಾಂಡುರಂಗರಾವ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ವಿಭಾಗ ಅಥಣಿ ರವೀಂದ್ರ ಮುರಗಾಲಿ, ದೀಪಕ ಕಾಂಬಳೆ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಚಿಕ್ಕೋಡಿ ಹಾಗೂ ತಾಲ್ಲೂಕಿನ ಎಲ್ಲ ಹಿರಿಯ ಹಾಗೂ ಕಿರಿಯ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ವಿಭಾಗ ಅಥಣಿ ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

error: Content is protected !!