11/12/2025
IMG-20250719-WA0003

ಬೆಳಗಾವಿ-19 : ಬೆಳಗಾವಿ ಗ್ರಾಮೀಣ ಕ್ಷೇತ್ರದ 4 ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ವಿಶೇಷ ಪ್ರಯತ್ನ ಮಾಡಿ ಸರಕಾರದ ಅನುದಾನ ಬಿಡುಗಡೆ ಮಾಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಆಯಾ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಚೇಕ್ ಹಸ್ತಾಂತರಿಸಿದರು.

ಭೀಮಗಡ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ 10 ಲಕ್ಷ ರೂ., ಬೆಂಡಿಗೇರಿ ಗ್ರಾಮದ ಶ್ರೀ ವಿಠ್ಠಲ- ರುಕ್ಮಿಣಿ ದೇವಸ್ಥಾನಕ್ಕೆ 10 ಲಕ್ಷ ರೂ., ಅರಳಿಕಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ 6.66 ಲಕ್ಷ ರೂ. ಹಾಗೂ ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 3.33 ಲಕ್ಷ ರೂ. ಅನುದಾನ ನೀಡಲಾಯಿತು.
ಈವರೆಗೆ ಗ್ರಾಮೀಣ ಕ್ಷೇತ್ರದ 140ಕ್ಕೂ ಹೆಚ್ಚು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅನುದಾನ ಮಂಜೂರು ಮಾಡಿಸಿದ್ದು, ಇದೊಂದು ದಾಖಲೆಯಾಗಿದೆ.
ಈ ವೇಳೆ ಆಯಾ ಗ್ರಾಮಗಳ ಹಿರಿಯರು, ಜನ ಪ್ರತಿನಿಧಿಗಳು, ಸಚಿವರ ಸಾರ್ವಜನಿಕ ಸಂಪರ್ಕ ಅಧಿಕಾರಿ ಜೆ.ಬಿ.ಭಾಗೋಜಿಕೊಪ್ಪ ಹಾಗೂ ಆಪ್ತ ಸಹಾಯಕರು ಹಾಜರಿದ್ದರು.

error: Content is protected !!