10/12/2025
IMG-20250731-WA0002

ಖಾನಾಪುರ-31: ಖಾನಾಪುರ ತಾಲೂಕಿನ ಲಿಂಗನಮಠ ಗ್ರಾಮದಲ್ಲಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಎನ್.ಆರ್.ಎಲ್.ಎಮ್ ಹಾಗೂ ಎಸ್.ಎಲ್.ಡಬ್ಲ್ಯೂ.ಎಮ್ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ತಾಲೂಕಾ ಪಂಚಾಯತ ಖಾನಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಹಲಗೇಕರ್, ಅವರೊಳ್ಳಿ ಬಿಳಕಿ ರುದ್ರಸ್ವಾಮಿ ಮಠದ ಶ್ರೀ ಚನ್ನಬಸವ ದೇವರು, ಕಾರ್ಯನಿರ್ವಾಹಕ ಅಧಿಕಾರಿಗಳಾದ ರಮೇಶ ಮೇತ್ರಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಾಶೀಮ್ ಹಟ್ಟಿಹೊಳಿ, ಉಪಾಧ್ಯಕ್ಷರಾದ ಸರೋಜಾ ನಾಯ್ಕ್ ಹಾಗೂ ಸರ್ವ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

error: Content is protected !!