ಬೆಳಗಾವಿ-04:ಗೌರಿಗದ್ದೆ ಆಶ್ರಮದ ಅವಧೂತರಾದ ಶ್ರೀ ವಿನಯ ಗುರೂಜಿ ಅವರು ಸುಕ್ಷೇತ್ರ ಸವದತ್ತಿಯ ಶ್ರೀ ಯಲ್ಲಮ್ಮ ದೇವಿಯ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಸೋಮವಾರ ಸಂಜೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಆಶೀರ್ವದಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಇದ್ದರು.
