ಬೆಳಗಾವಿ-05:ಬೆಳಗಾವಿ ಆಗಸ್ಟ್ 5 ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಬೆಳಗಾವಿ ತಾಲೂಕಿನ ಬಡೇಕೊಳ್ಳ ಮಠದ ಬಳಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಆಗಿದ್ದನ್ನು ಪೊಲೀಸರು ಕ್ಲಿಯರ್ ಮಾಡಿಸಿದ್ದಾರೆ.
(National haiway) ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ಘಟನೆ ನಡೆದಿತ್ತು. ಒಂದು ಗಂಟೆಗಳ ಕಾಲ ಸುರಿದ ಮಳೆಗೆ ಹೆದ್ದಾರಿ ಮೇಲೆ ಹರಿಯುತ್ತಿರುವ ಅಪಾರ ಪ್ರಮಾಣದ ನೀರು ಸಂಗ್ರಹವಾಗಿ ಇಳಿಜಾರು ಇದ್ದ ಹಿನ್ನೆಲೆ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರು ಬೆಳಗಾವಿಯಿಂದ ಧಾರವಾಡಕ್ಕೆ ಹೋಗುವ ವಾಹನ ಸವಾರರು ಪರದಾಟ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರ ಗಮನಕ್ಕೆ ಬರುತ್ತಿದ್ದಂತೆಯೇ ಹಿರೇಬಾಗೆವಾಡಿ ಪೊಲೀಸರಿಂದ ಟ್ರಾಫಿಕ್ ಕ್ಲಿಯರ್ ಮಾಡುವ ಕೆಲಸ ಮಾಡಿಸಿದರು
