23/12/2024
IMG-20240128-WA0000

ಬೆಂಗಳೂರು-28: ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು

ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮಲ್ಲೇಶ್ವರಂ ಕೆ .ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು.

*219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ*
ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2000 ರೂ.ಗಳಿಗಿಂತ ಹೆಚ್ಚಿದೆ.ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯ ವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ . 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದರು.

*ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ*
ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೂ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲ್ಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದರು.

*ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ*
ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ. ಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ 60 ರಷ್ಟು ಹಾಗೂ ಕೇಂದ್ರ ಸರ್ಕಾರ ಶೇ 40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

*ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ*
ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮ ಗಳು ಪ್ರಮುಖ. ಶಕ್ತಿ ಯೋಜನೆಯಡಿ 141 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.

*5 ಗ್ಯಾರಂಟಿ*
1. 18 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ. 5 ಕೆಜಿ ಅಕ್ಕಿಗೆ 170 ರೂ. ಪ್ರತಿ ತಿಂಗಳು, 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

*150 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ*
ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!