11/12/2025
IMG-20250827-WA0001

ಸಚಿವರಿಗೆ ಧನ್ಯವಾದ ಸಲ್ಲಿಸಿದ ಶಿಕ್ಷಕರ ಸಂಘ

ಬೆಳಗಾವಿ-27: ಬೆಳಗಾವಿ ಜಿಲ್ಲಾ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣಕ್ಕಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮುತುವರ್ಜಿ ವಹಿಸಿದ ಫಲವಾಗಿ 17 ಗುಂಟೆ ಜಾಗ ಮಂಜೂರಾಗಿದ್ದು, ಮಂಗಳವಾರ ಆದೇಶ ಪತ್ರ ಹಸ್ತಾಂತರಿಸಲಾಯಿತು.

ಕುವೆಂಪು ನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಗುರುಭವನ ನಿರ್ಮಾಣಕ್ಕಾಗಿ ಮಂಜೂರಾಗಿರುವ 17 ಗುಂಟೆ ಜಾಗದ ಆದೇಶ ಪತ್ರವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಕ್ಷಕ ಸಂಘದ ಪದಾಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ, ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಸಚಿವರು ಈಡೇರಿಸಿದ್ದಾರೆ. ತಾವು ನೀಡಿದ ಭರವಸೆಯಂತೆ ಜಾಗವನ್ನು ಮಂಜೂರು ಮಾಡಿಸಿಕೊಟ್ಟಿದ್ದಾರೆ ಎಂದರು.

ಗುರುಭವನಕ್ಕೆ ಜಾಗ ಮಂಜೂರು ಮಾಡಿಸಿಕೊಡುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಗುರುಕಾಣಿಕೆ ಅರ್ಪಿಸಿದ್ದಾರೆ. ಇಡೀ ರಾಜ್ಯಕ್ಕೆ ಮಾದರಿಯಾಗಿರುವ ಕೆಲಸವನ್ನು ಸಚಿವರು ಮಾಡಿದ್ದಾರೆ. ಹಿಂಡಲಗಾ ಗ್ರಾಮದ ಗಣಪತಿ ಮಂದಿರದ ಬಳಿ 17 ಗುಂಟೆ ಜಾಗದಲ್ಲಿ ಗುರುಭವನ ನಿರ್ಮಾಣಗೊಳ್ಳಲಿದೆ ಎಂದು ಚನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ್‌ ಹೆಬ್ಳಿ, ಸಚಿವರು ನೀಡಿದ ಭರವಸೆಯಂತೆ ಅತ್ಯಂತ ಕಡಿಮೆ ಅವಧಿಯಲ್ಲಿ ಜಾಗವನ್ನು ಮಂಜೂರು ಮಾಡಿಸಿದ್ದಾರೆ. ಇಡೀ ಶಿಕ್ಷಕ ಬಳಗಕ್ಕೆ ಇದರಿಂದ ಸಂತೋಷವಾಗಿದೆ. ಇದಕ್ಕಾಗಿ ಸಮಸ್ತ ಶಿಕ್ಷಕರ ಬಳಗದ ವತಿಯಿಂದ ಧನ್ಯವಾದ ಅರ್ಪಿಸುತ್ತೇನೆ. ಗುರುಭವನ ನಿರ್ಮಾಣಕ್ಕೆ ಶೀಘ್ರವೇ ಶಂಕುಸ್ಥಾಪನೆ ಮಾಡಲಾಗುವುದು. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಅವರುಗಳನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು ಎಂದರು.

ಈ ವೇಳೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌, ಡಿಡಿಪಿಐ ಲೀಲಾವತಿ ಹಿರೇಮಠ್, ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಗ್ರಾಮೀಣ ಶಿಕ್ಷಣಾಧಿಕಾರಿ ಆಂಜನೇಯ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಕರ ಸಂಘಟನೆಯ ಪರವಾಗಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರನ್ನು ಸನ್ಮಾನಿಸಲಾಯಿತು.

error: Content is protected !!