ಬೆಳಗಾವಿ-16:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ಕುಂದಾನಗರಿ ಬೆಳಗಾವಿ ನಗರಕ್ಕೆ ಸೆ.19 ರಂದು ಭೇಟಿ ನೀಡಲಿದ್ದಾರೆ.
ಸೆ.19ರಂದು ಬೆಳಗ್ಗೆ ನಗರದ ಲಿಂಗಾಯತ ಭವನದಲ್ಲಿ ಜರುಗುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಬೆಳಗಾವಿ ಮಹಾಸಭೆ ಜಿಲ್ಲಾ ಮಹಿಳಾ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದವನ್ನು ಪಡೆಯಲಿದ್ದಾರೆ.
