ಹುಬ್ಬಳ್ಳಿ–19: ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಸಮಾವೇಶದಲ್ಲಿ ವಿವಿಧ ಮಠಗಳ ಮಠಾಧೀಶರು, ವೀರಶೈವ ಲಿಂಗಾಯತ್ ಸಮಾಜದ ಮುಖಂಡರು, ಮಹಾಸಭಾ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ವೀರಶೈವ ಲಿಂಗಾಯತರು ಹಾಜರಿದ್ದರು.
