ಬೆಳಗಾವಿ-22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯಂತೆ ಹಲಗಾ ಗ್ರಾಮಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಶುಕ್ರವಾರ ಹಲಗಾ ಗ್ರಾಮಸ್ಥರು ಸಚಿವರ ಕಚೇರಿಗೆ ತೆರಳಿ ಬಸ್ ವ್ಯವಸ್ಥೆಗೆ ಮನವಿ ಮಾಡಿದ್ದರು.
ತಕ್ಷಣ ಸ್ಪಂದಿಸಿದ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಅದರಂತೆ ಇಂದಿನಿಂದ ಹಲಗಾಕ್ಕೆ ಬಸ್ ಆರಂಭವಾಗಿದೆ. ಬೆಳ್ಳಂ ಬೆಳಗ್ಗೆ ಬಸ್ ಬರುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಿಸಿದರು. ಸಚಿವರ ಆಪ್ತ ಕಾರ್ಯದರ್ಶಿ ಮಹಾಂತೇಶ ಹಿರೇಮಠ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
