ಬೆಳಗಾವಿ-25:ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಸ್ಮರಣೆ ಅಂಗವಾಗಿ ಬೆಳಗಾವಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪುಷ್ಪ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಪ್ರಮುಖರಾದ ತಮ್ಮಣ್ಣಪ್ಪಗೌಡ ಪಾಟೀಲ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಸಾಮಾಜಿಕ ಜಾಲತಾಣ ಜಿಲ್ಲಾ ಸಂಚಾಲಕ ಸುಭಾಷ್ ಸಣ್ಣವೀರಪ್ಪನವರ, ವೈದ್ಯಕೀಯ ಪ್ರಕೋಷ್ಠ ಜಿಲ್ಲಾ ಸಂಚಾಲಕ ಗುರುಪ್ರಸಾದ ಕೋತಿನ್, ಮನೋಜ್ ಪಾಟೀಲ ಹಾಗೂ ಪ್ರಮುಖರು ಹಾಜರಿದ್ದರು.
