ಬೆಂಗಳೂರು-01: ಹೃದಯಾಘಾತದಿಂದ ಖ್ಯಾತ ನಟ, ರಂಗಭೂಮಿ ನಿರ್ದೇಶಕ ‘ಯಶವಂತ ಸರದೇಶಪಾಂಡೆ’ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು.
ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಪಾತ್ರವಹಿಸಿದ್ದರು. ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದರು. ಯಶವಂತ ಸರದೇಶಪಾಂಡೆಯವರು ಹುಟ್ಟಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬ ಹಳ್ಳಿಯಲ್ಲಿ ೧೩.೦೬.೧೯೬೫ರಲ್ಲಿ. ತಂದೆ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ.
