ಖಾನಾಪುರ-18 : ಖಾನಾಪುರ ತಾಲೂಕಿನ ತೋಪಿನಕಟ್ಟಿಯಲ್ಲಿ ದೀಪಾವಳಿಯ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ಪ್ರೌಢಶಾಲಾ ಮಾಜಿ ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಲಾಗಿದ್ದ ಭವ್ಯ ಖೋ-ಖೋ ಮತ್ತು ಕಬಡ್ಡಿ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.
ದೈಹಿಕ ಚಟುವಟಿಕೆಗಳ ಕಡೆಗೆ ಯುವಕರನ್ನು ಆಕರ್ಷಿಸುವ ಉದ್ದೇಶದಿಂದ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಲು ಕ್ರೀಡೆ ಮಹತ್ವದ ಪಾತ್ರ ವಹಿಸಲಿದೆ ಎಂದು ಚನ್ನರಾಜ ಹೇಳಿದರು.
ಇದೇ ಸಂದರ್ಭದಲ್ಲಿ, ಎಂ.ಕೆ.ಹುಬ್ಬಳ್ಳಿ ಮಲಪ್ರಭಾ ಸಹಕಾರಿ ಸಕ್ಕರೆಯ ಕಾರ್ಖಾನೆಯ ನೂತನ ಆಡಳಿಯ ಮಂಡಳಿಯ ನಿರ್ದೇಶಕರುಗಳನ್ನು ಸನ್ಮಾನಿಸಲಾಯಿತು. ಶಾಸಕ ವಿಠ್ಠಲ ಹಲಗೇಕರ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
