11/12/2025
IMG-20251022-WA0008

ಮಂಗಳೂರು ದಕ್ಷಿಣ ಕನ್ನಡ-22:ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು. ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.

IMG 20251022 125735 - IMG 20251022 125735

ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು.

error: Content is protected !!