ಚನ್ನಮ್ಮನ ಕಿತ್ತೂರು-24:ಐತಿಹಾಸಿಕ ಕಿತ್ತೂರು ಉತ್ಸವ-2025 ರ ಅಂಗವಾಗಿ ಆಯೋಜಿಸಲಾಗಿರುವ ಜಾನಪದ ಕಲಾವಾಹಿನಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿ, ಮೆರವಣಿಗೆಯಲ್ಲಿ ಪಾಲ್ಗೊಂಡರು.
ಇದಕ್ಕೂ ಮೊದಲು ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ವೀರ ಕೇಸರಿ ಅಮಟೂರು ಬಾಳಪ್ಪನವರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ನಂತರ, ಕಿತ್ತೂರಿನಲ್ಲಿ ನಿರ್ಮಿಸಲಾಗಿರುವ ಕಿತ್ತೂರು ಚೆನ್ನಮ್ಮ ಸಭಾಭವನ ಕಟ್ಟಡವನ್ನು ಸಹ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಕಿತ್ತೂರು ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಆಸೀಫ್ ಸೇಠ್, ಮಹಾಂತೇಶ ಕೌಜಲಗಿ, ವಿಶ್ವಾಸ್ ವೈದ್ಯ, ಅಧಿಕಾರಿಗಳು, ಸ್ಥಳೀಯ ನಾಯಕರು ಹಾಜರಿದ್ದರು.
