11/12/2025
IMG-20251025-WA0000

ಸವದತ್ತಿ-25:ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಹೂಲಿ ಸಾಂಬಯ್ಯನವರ ಮಠದ ಶ್ರೀ ಉಮೇಶ್ವರ ಶಿವಾಚಾರ್ಯ ಅಜ್ಜನವರ ಅಮೃತ ಹಸ್ತದಿಂದ 2025-2026 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಲಾಯಿತು.

IMG 20251022 125735 - IMG 20251022 125735

ಹರ್ಷ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಂತೆ, 2024-2025 ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡಿದ 21 ಜನ ಪ್ರಗತಿಪರ ರೈತರನ್ನು ಗುರುತಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ, ಗಿರಿಜಾತಾಯಿ ಹಟ್ಟಿಹೊಳಿ, ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಸದಾಶಿವ್ ತೋರಾಥ್, ಕಬ್ಬು ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಎನ್ ಎಮ್ ಪಾಟೀಲ, ಎಥೆನಾಲ್ ಘಟಕದ ವ್ಯವಸ್ಥಾಪಕರಾದ ಸಾಂಬ್ರೇಕರ್, ಕಾರ್ಖಾನೆಯ ಮುಖ್ಯ ಆಡಳಿತಾಧಿಕಾರಿ ಚೌಕಿಮಠ್, ಕಾರ್ಖಾನೆಯ ಎಲ್ಲ ವಿಭಾಗದ ಸಿಬ್ಬಂದಿ, ಬೈಲಹೊಂಗಲ, ಸವದತ್ತಿ, ಕಿತ್ತೂರು ಹಾಗೂ ಧಾರವಾಡ ಭಾಗದ ಪ್ರಮುಖ ರೈತ ಮುಖಂಡರು ಹಾಜರಿದ್ದರು.

error: Content is protected !!