11/12/2025
IMG-20251107-WA0001

ಬೆಳಗಾವಿ-07: ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ ಕಬ್ಬಿಗೆ 3500 ರೂ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.

ಬುಧವಾರ ಕರವೇ ನಾರಾಯಣಗೌಡ ಬಣದ ಜಿಲ್ಲಾಅಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ತೆರಳಿ, ರೈತರ ನಿಗದಿತ ಬೆಲೆಯ ಬೆಂಬಲಕ್ಕಾಗಿ, ಸರಕಾರವು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ನಂತರ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆ ಗೊಳಿಸಿದರು. ರಾಜ್ಯ‌ ಸರಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು, ಕಬ್ಬು ಬೆಳೆಗಾರರ ರೈತಾಪಿ ಗರ್ವದ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಬೇಕೆಂದು ಇಲ್ಲದಿದ್ದರೆ ರಾಜ್ಯಾದ್ಯಂತ ಕರವೇ ಸರಕಾರದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಕರವೇ ನಾರಾಯಣಗೌಡ ಬಣದ
ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ ಗುಡಗನಟ್ಟಿ, ರಾಜ್ಯ ಸಂಚಾಲರಾದ ಸುರೇಶ ಗವನ್ನವರ, ಗಣೇಶ ರೋಕಡೆ, ಬಾಳು ಜಡಗಿ, ಹೋಳೆಪ್ಪಾ ಸುಲಧಾಳ,ಸುಧೀರ ಪಾಟೀಲ,ಮದು ಇಟಗಿ,ಸತೀಶ ಗುಡದವರ,ವಿಠಲ್ ಕಡಕೋಳ, ವಿಠಲ ಹಿಂಡಲ್ಗೇಕರ, ಭೂಪಾಲ್ ಅತ್ತು,ರಮೇಶ್ ಯರಗಣ್ಣವರ, ತಾಲೂಕಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

error: Content is protected !!