ಬೆಳಗಾವಿ-08 : ಕಳೆದ ಒಂಬತ್ತು ದಿನಗಳಿಂದ ಕಬ್ಬಿನ ಬೆಂಬಲ ಬೆಲೆ ನಿಗದಿ ಪಡಿಸುವಂತೆ ಆಗ್ರಹಸಿ ರೈತರು ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಶುಕ್ರವಾರ ಮಧ್ಯಾಹ್ನದ ವೇಳೆ ಹತ್ತರಗಿ ಟೋಲ್ ಪ್ಲಾಜಾ ಬಳಿ ರೈತರು ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆದಿದೆ.
ಕಲ್ಲು ತೂರಾಟ ವಿಚಾರಕ್ಕೆ ರೈತ ಮುಖಂಡ ಶಶಿಕಾಂತ ಗುರೂಜಿ ಸ್ಪಷ್ಟಪಡಿಸಿದ್ದಾರೆ. ರೈತರ ಹೋರಾಟದ ವೇಳೆ ಕಲ್ಲು ತೂರಾಟ ಮಾಡಿದರು ರೈತರು ಅಲ್ಲ ಎಂದರು.
ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು.
ಕಳೆದ ಏಂಟು ದಿನಗಳಿಂದ ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ.
ನಮ್ಮ ಹೋರಾಟವನ್ನು ನಿಲ್ಲಿಸಲು ಕಲ್ಲು ತೂರಾಟದ ಷಡ್ಯಂತ್ರ ಮಾಡಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನಾ ನಿರತ ರೈತರ ಆಕ್ರೋಶದ ಕಟ್ಟೆ ಶುಕ್ರವಾರ ಒಡೆದಿದೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನಿಂತಿದ್ದ ಪೊಲೀಸ್ ವಾಹನಗಳ ಮೇಲೆ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೆಯಲ್ಲಿ ಪೊಲೀಸರು ಸ್ಥಳದಿಂದ ಓಡಿ ಹೋಗಿದ್ದಾರೆ.
ಸರಕಾರದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಹೋರಾಟದಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲು ಭಾರೀ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ತಂದು ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸರಕಾರದ ವಿರುದ್ದ ಆಕ್ರೋಶ ಹೋರ ಹಾಕಿರುವ ವೇಳೆ ಯಾರೋ ಹಿರಿಗೇರಿಗಳು ಈ ಕೃತ್ಯವನ್ನು ಏಸೆಗಿದ್ದಾರೆ ಎಂದು ಸ್ಪಷ್ಟ ಪಡಿಸಿದರು.
