ಬೆಳಗಾವಿ-10 : ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ನಮ್ಮೆಲ್ಲರ ಸಹಮತದಿಂದ ಅಣ್ಣಾಸಾಹೇಬ್ ಜೊಲ್ಲೆ ಅವರನ್ನ ಆಯ್ಕೆ ಮಾಡಿದ್ದೇವೆ. ಬ್ಯಾಂಕ್ ನಡೆಸಿದ ಅನುಭವ ಅವರಿಗಿದ್ದು, ಬಿಡಿಸಿಸಿ ಬ್ಯಾಂಕ್‌ನ್ನು ಅಭಿವೃದ್ದಿಪತದತ್ತ ಕೊಂಡ್ಯೊಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೇ ಇರಲಿ ನಮ್ಮ ಜತೆ ಇದ್ದವರನ್ನು ನಾವು ಕೈ ಬಿಡಲ್ಲ. ಅಣ್ಣಾಸಾಹೇಬ್ ಜೊಲ್ಲೆ ಅವರು ನಿರ್ದೇಶಕರಾಗಿ ಆಯ್ಕೆಯಾಗಲು ಅವರ ಜತೆ ನಿಂತಿದ್ದೇವೆ. ಈಗಲೂ ಅವರು ಅಧ್ಯಕ್ಷರಾಗಿ ಆಯ್ಕೆಯಾಗಲು ನಾವು ಸಹಕಾರ ನೀಡುತ್ತೇವೆ. ಜಿಲ್ಲೆಯಿಂದ ಒಬ್ಬರನ್ನು ಹಾಲುಮತ ಸಮಾಜದವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.
