ಬೆಳಗಾವಿ-03: ನಗರದ ಕೆ.ಎಲ್.ಎಸ್ ಸೊಸೈಟಿಯ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಜೀವನ ಸಮರ್ಪಿಸಿದ ಹುತಾತ್ಮರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ಆರ್. ಎಲ್. ಕಾನೂನು ಕಾಲೇಜಿನ ವಿದ್ಯಾರ್ಥಿ ಮಲ್ಲಿಕಾರ್ಜುನ ಪೂಜಾರಿ ಪ್ರಥಮ ಸ್ಥಾನದೊಂದಿಗೆ ಟ್ರೋಫಿ ಹಾಗೂ ಒಂದು ಸಾವಿರ ರೂಪಾಯಿ ನಗದು ಬಹುಮಾನ ಪಡೆದರು. ಸ್ಪರ್ಧೆಯಲ್ಲಿ ವಿವಿಧ ಕಾಲೇಜಿನ ಒಟ್ಟು ಮೂವತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.