ಬೆಳಗಾವಿ-20: ಜೆಡಿಎಸ್ ಪ್ರಾದೇಶಿಕ ಪಕ್ಷ ನಿರ್ಮಾಣವಾಗಿ ೨೫ ವರ್ಷ ಪೂರೈಸಿದೆ. ಬೆಂಗಳೂರಿನ ಜೆಡಿಎಸ್ ಕೇಂದ್ರ ಕಛೇರಿಯಲ್ಲಿ ನ.೨೨ ರಂದು ಕಾರ್ಯಕಾರಣಿ ಸಭೆ ಆಯೋಜಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.
ಬುಧವಾರ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇತ್ರತ್ವದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡಿ ೨೫ ವರ್ಷ ತುಂಬಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಟ್ಟದ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಪಧಾದಿಕಾರಿಗಳು, ಹಾಲಿ ಮತ್ತು ಮಾಜಿ ಶಾಶಕರುಗಳು, ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಬೆಳಗಾವಿ ಜಿಲ್ಲೆಯ ಜೆಡಿಎಸ್ ಪಕ್ಷದ ಅಧಿಕಾರ ಅನುಭವಿಸಿದ ಬೇರೆ ಪಕ್ಷಕ್ಕೆ ಹೋದ ವರಿಷ್ಠ ನಾಯಕರಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಲ್ಲಿ ಸಂಘಟಿಸಬೇಕಾಗಿದೆ ಎಂದರು. ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪ್ರಯತ್ನ ಎಲ್ಲರು ಸೇರಿಕೊಂಡು ಮಾಡೋಣ ಎಂದು ಕರೆ ಕೊಟ್ಟರು.
