11/12/2025
IMG-20251125-WA0002

ಬೆಳಗಾವಿ-25 :ಇಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ವಾರ್ಷಿಕ ಘಟಿಕೋತ್ಸವವು ನವೆಂಬರ್ 25 ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಜಾನೆ 11:30 ಗಂಟೆಗೆ ಜರುಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಸಿ.ಎಂ.ತ್ಯಾಗರಾಜ್ ಅವರು ತಿಳಿಸಿದರು.

ಸೋಮವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ವಾರ್ಷಿಕ ಘಟಿಕೋತ್ಸವದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರದ ಥಾವರ್ಚಂದ ಗೆಹ್ಲೋಟ್ ಅವರು ವಹಿಸಲಿದ್ದು, ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಹಿರಿಯ ಇಂಗ್ಲೀಷ ಪ್ರಾಧ್ಯಾಪಕರು, ಪದ್ಮಶ್ರೀ ಪುರಸ್ಕಂತ . ಎಸ್. ಕಿರಣಕುಮಾರ್ ಮಾಜಿ ಅಧ್ಯಕ್ಷರು, ಇಸ್ರೋ  ಹಾಗೂ ಜಿ. ಎಮ್. ಮೋದಿ ವಿಜ್ಞಾನ ಪ್ರಶಸ್ತಿ ಪುರಸ್ಕೃತರು ಅವರು ಘಟಿಕೋತ್ಸವದ ಭಾಷಣ ಮಾಡುವರು ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವರು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುತ್ತ ಜ್ಞಾನಮುಖಿ, ಸಮಾಜಮುಖಿ, ಉದ್ಯೋಗಮುಖಿ ಚಿಂತನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವುದರೊಂದಿಗೆ ಶೈಕ್ಷಣಿಕವಾಗಿ ಹಾಗೂ ಗುಣಾತ್ಮಕವಾಗಿ ಬೆಳೆಯುತ್ತಿದೆ. ಹಿರೇಬಾಗೆವಾಡಿಯಲ್ಲಿ 126 ಎಕರೆ ಪ್ರದೇಶದಲ್ಲಿ ಆಡಳಿತ ಕಟ್ಟಡಗಳು ಹಾಗೂ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಕಾರ್ಯವು ಮುಕ್ತಾಯ ಹಂತದಲ್ಲಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ನೀರು ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

 

ಸದರಿ ವಿಶ್ವವಿದ್ಯಾಲಯಕ್ಕೆ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ 361 ಮಹಾವಿದ್ಯಾಲಯಗಳು ಸಂಯೋಜನೆಗೊಂಡಿದ್ದು 1.39 ಲಕ್ಷ ಸ್ನಾತ್ತಕ, ಸ್ನಾತ್ಕೋತ್ತರ ಹಾಗೂ ಪಿ.ಹೆಚ್.ಡಿ ವಿಧ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ, ಸಂಗೋಳ್ಳಿ ರಾಯಣ್ಣ ಅಧ್ಯಯನ ಪೀಠಗಳು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ನಾಲ್ಕು ವಿಷಯಗಳಲ್ಲಿ ಪಿ.ಜಿ. ಡಿಪ್ಲೊಮಾ ಕೋರ್ಸುಗಳು ಹಾಗೂ 325ಕ್ಕಿಂತ ಹೆಚ್ಚು ಸಂಶೋಧನಾರ್ಥಿಗಳಿಂದ ಹಲವಾರು ವಿಷಯಗಳ ಕುರಿತು ಪಿ.ಹೆಚ್.ಡಿ. ಸಂಶೋಧನೆಗಳು ಜರುಗುತ್ತಿವೆ.

 

ಗೌರವ ಡಾಕ್ಟರೇಟ್ ಪ್ರಶಸ್ತಿ:

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದ ಸಂದರ್ಭದಲ್ಲಿ ಪರಿಸರ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿವಾಜಿ ಛತ್ರು ಕಾಗಣಿಕರ್ ಅವರಿಗೆ ಶಿಕ್ಷಣ, ಸಮಾಜ ಸೇವೆ, ಪರಂಪರೆ ಸಂರಕ್ಷಣೆ ಕ್ಷೇತ್ರದಲ್ಲಿ ವಿನೋದ ಸುರೇಂದ್ರ ದೊಡ್ಡಣ್ಣವರ ಅವರಿಗೆ ಹಾಗೂ ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಬಸವರಾಜ ಯಲಿಗಾರ ಅವರಿಗೆ ಗೌರವ ಡಾಕ್ಟರೇಟ ಪದವಿಯನ್ನು ನೀಡಲಾಗುವುದು.

 

ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಒಟ್ಟು 38485 ವಿದ್ಯಾರ್ಥಿಗಳು (36642 ಸ್ನಾತಕ ಹಾಗೂ 1843 ವಿದ್ಯಾರ್ಥಿಗಳು ಸ್ನಾತ್ತಕೋತ್ತರ) ಪದವಿಯನ್ನು ಪಡೆದುಕೊಳ್ಳಲು ಅರ್ಹರಾಗಿದ್ದು, 125 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 39 ಸುವರ್ಣ ಪದಕಗಳನ್ನು, 04 ವಿಷಯವಾರು ಅಗ್ರ ಶ್ರೇಯಾಂಕಿತರು ಹಾಗೂ ಒಂದು ನಗದು ಬಹುಮಾನವನ್ನು (ಇಬ್ಬರು ವಿದ್ಯಾರ್ಥಿಗಳಿಗೆ), 28 ಪಿ.ಹೆಚ್.ಡಿ ಪದವಿಗಳನ್ನು ಪ್ರಧಾನ ಮಾಡಲಾಗುವುದು ಎಂದು ಕುಲಪತಿಗಳಾದ ಪ್ರೊ. ಸಿ.ಎಂ.ತ್ಯಾಗರಾಜ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!