11/12/2025
IMG-20251130-WA0025

ಗ್ಯಾರಂಟಿ ಯೋಜನೆಗಳ ಜಾರಿ- ರಾಜ್ಯ ಸರ್ಕಾರ ದೇಶಕ್ಕೇ ಮಾದರಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ-01: ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸುಮಾರು 70 ವರ್ಷಗಳಿಂದ ಪ್ರತಿ ಸರ್ಕಾರದ ಅವಧಿಯಲ್ಲಿ ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ನಗರದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಹಯೋಹದಲ್ಲಿ ಭಾನುವಾರ (ನ.30) ನಡೆದ ಪಂಚ ಗ್ಯಾರಂಟಿ ಅನುಷ್ಠಾನದ ಕುರಿತು ಜಿಲ್ಲಾ‌ ಗ್ಯಾರಂಟಿ‌ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಗ್ಯಾರಂಟಿ ಯೋಜ‌ನೆ ಜಾರಿಗೂ‌ ಮುನ್ನ ಅನೇಕ ಟೀಕೆಗಳು ಎದುರಾದರೂ ಸಹ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡಜನರನ್ನು ಆರ್ಥಿಕವಾಗಿ ಸ್ವಾವಲಂಭಿಗಳಾಗಿಸುವುದರ ಜೊತೆಗೆ ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಪ್ರತಿವರ್ಷ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದೆ. ರಾಜ್ಯ ಸರಕಾರದ‌ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಗಳು ರಾಜ್ಯದ ಪ್ರತಿಯೊಬ್ಬ ಫಲಾನುಭವಿಗೂ ಸಮರ್ಪಕವಾಗಿ ತಲುಪಿಸುವ ಕಾರ್ಯವಾಗಬೇಕು.

ಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸಲಾಗುವುದು. ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ನೀರಾವರಿ, ರಸ್ತೆ , ಶೈಕ್ಷಣಿಕ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತಿದೆ.

ಪ್ರತಿಯೊಬ್ಬರಿಗೆ ಅಂದಾಜು ಐದು ಸಾವಿರ ರೂಪಾಯಿವರೆಗೆ ನೀಡಲಾಗುತ್ತಿದೆ. ಈ ಹಣವನ್ನು ಪ್ರತಿಯೊಬ್ಬರೂ ಉತ್ತಮ ಕಾರ್ಯಗಳಿಗೆ ಸದುಪಯೋಗ ಪಡೆದುಕೊಳ್ಳಬೇಕು. ಐದು ವರ್ಷಗಳಿಗೆ ಮೂರು ಲಕ್ಷ‌ ಕೋಟಿ‌ ರೂ. ಗಳನ್ನು‌ ಮೀಸಲಿಡಲಾಗುವುದು. ರಾಜ್ಯ ಸರಕಾರ ಜಾರಿಗೊಳಿಸಿರುವ ಜನಪರ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಇತರರಿಗೂ ತಿಳಿಸುವಂತೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಕರೇ ನೀಡಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ‌ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಿಂದಾಗಿ ಇಂದು ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ. ಪಂಚ ಗ್ಯಾರಂಟಿ ಯೋಜ‌ನೆಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜ‌ನೆಗಳು ಪ್ರತಿಯೊಬ್ಬ ಅರ್ಹರಿಗೆ ತಲುಪಿಸುವ ಕಾರ್ಯವಾಗಬೇಕು ಎಂದರು.

ನಮ್ಮ‌ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರು ಉಳುವವನೆ ಒಡೆಯ; ಬಂಗಾರಪ್ಪನವರು ಆಶ್ರಯ ಯೊಜ‌ನೆ, ರೈತರಿಗೆ ಉಚಿತ ವಿದ್ಯುತ್, ವೀರಪ್ಪ ಮೊಯಲಿ ಅವರು ಸಿ.ಇ.ಟಿ. ವ್ಯವಸ್ಥೆ; ಎಸ್.ಎಂ ಕೃಷ್ಣ ಅವರು ರಾಜ್ಯದ ಆರ್ಥಿಕತೆಗೆ ಒತ್ತು ನೀಡುವುದರ‌ ಮೂಲಕ ರಾಜ್ಯದ ಅಭಿವೃದ್ದಿಗೆ ಮುನ್ನುಡಿ ಬರೆದಿದ್ದರು. ಇವೆಲ್ಲವನ್ನೂ ಮೀರಿ ಸಿದ್ದರಾಮಯ್ಯನವರು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿರುತ್ತಾರೆ.
ರಾಜ್ಯ ಸರಕಾರದ‌ ಮಹತ್ವಕಾಂಕ್ಷೆ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ತಲಾ ಆದಾಯವು ಹೆಚ್ಚಳವಾಗಿದೆ. ಸರಕಾರವು ರಾಜ್ಯದ ಮಹಿಳೆಯರ ಸಬಲೀಕರಣಕ್ಕೂ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇಂದು‌ ನಮ್ಮ ರಾಜ್ಯವು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ರೇವಣ್ಣ ತಿಳಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ‌ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ ಅವರು ಮಾತನಾಡಿ, 2023 ರ ಚುನಾವಣೆ ಪೂರ್ವದಲ್ಲಿ ಪಂಚಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಅದರಂತೆ ರಾಜ್ಯ ಸರಕಾರವು ಅಧಿಕಾರಕ್ಕೆ ಬಂದ ತಕ್ಷಣವೇ ಕೊಟ್ಟ‌ ಮಾತಿನಂತೆ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಜಾರಿಗೊಳಿಸಿ ಹಂತ ಹಂತವಾಗಿ ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ರಾಜ್ಯ ಸರಕಾರವು ನುಡಿದಂತೆ ನಡೆದಿದೆ ಎಂದರು.
ಪಂಚ ಗ್ಯಾರಂಟಿಯಿಂದಾಗಿ ರಾಜ್ಯದ‌ ಲಕ್ಷಾಂತರ ಜನರು ಸ್ವಯಂ ಉದ್ಯೋಗ ಪ್ರಾರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಗಳಾಗಿದ್ದಾರೆ. ಇಡೀ ದೇಶದಲ್ಲಿಯೇ ರಾಜ್ಯದ ತಲಾ ಆದಾಯ ಹೆಚ್ವಳವಾಗಿದ್ದು ಇದಕ್ಕೆ ರಾಜ್ಯ ಸರಕಾಎ ಅನುಷ್ಠಾನಗೊಳಿಸದ ಪಂಚಗ್ಯಾರಂಟಿ ಯೋಜನೆಯೇ ಕಾರಣವಾಗಿದೆ ಎಂದು ಎಸ್.ಆರ್.ಪಾಟೀಲ‌ ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಮಾತನಾಡಿ, ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನು ಸರಕಾರ ಅಧಿಕಾರಕ್ಕೆ ಬಂದ‌ ತಕ್ಷಣವೆ ಪಂಚ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವ‌ ಮೂಲಕ ಕ್ರಾಂತಿಕಾರಿ‌ ಬದಲಾವಣೆ ತರುವ ಮೂಲಕ ರಾಜ್ಯವು ದೇಶಕ್ಕೆ ಮಾದರಿಯಾಗಿದೆ ಎಂದರು.

ಶಾಸಕರಾದ ರಾಜು(ಆಸೀಫ್)ಸೇಠ ಅವರು ಮಾತನಾಡಿ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಪೂರ್ಣಗೊಂಡಿವೆ. ಚುನಾವಣಾ ಪೂರ್ವದಲ್ಲಿ ನೀಡದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯ ಸರಕಾರವು ಗ್ಯಾರಂಟಿಬಯೋಜನೆಗಳ ಜೊತೆಗೆ ಅನೇಕ ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ ಎಂದು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮುತ್ತುರಾಜ್ ಅವರು ಮಾತನಾಡಿ, ಸಾಕಷ್ಟು ಟೀಕೆಗಳ‌ ನಡುವೆಯೂ ರಾಜ್ಯ ಸರಕಾರವು ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಎಲ್ಲ ಟೀಕೆಗಳಿಗೆ ಉತ್ತರ ದೊರಕಿದಂತಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಒಳ್ಳೆಯದಾಗಿದೆ ಎಂದು ಅಧ್ಯಯನದ‌ ಮೂಲಕ ತಿಳಿದು ಬಂದಿರುತ್ತದೆ. ಶಕ್ತಿ ಯೋಜನೆಯಡಿ ಆರು ನೂರು ಕೋಟಿಗೂ ಅಧಿಕ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು ಇದರಿಂದ ರಾಜ್ಯದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದಾಗಿ ರಾಜ್ಯದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗುವ ಮೂಲಕ ಬಹುದೊಡ್ಡ ಬದಲಾವಣೆಯನ್ನು ನಾವು‌ ಕಾಣಬಹುದಾಗಿದೆ.
ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಿಂದಾಗಿ ಪ್ರತಿ ಕುಟುಂಬಕ್ಕೆ ಪ್ರತಿ ಮಾಹೆ ಅಂದಾಜು ನಾಲ್ಕರಿಂದ ಐದು ಸಾವಿರ ರೂಪಾಯಿಗಳ ಉಳಿತಾಯವಾಗುತ್ತಿದ್ದು ಇದರಿಂದಾಗಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ಮೂಲಕ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜ್ಯದ ತಲಾ ಆದಾಯದ ಹೆಚ್ಚಳದಿಂದಾಗಿ ಕೇಂದ್ರಕ್ಕೆ ರಾಜ್ಯದಿಂದ ಹೆಚ್ಚಿನ‌ ತೆರಿಗೆಯನ್ನು ನೀಡಲಾಗುತ್ತಿದೆ. ರಾಜ್ಯದ ಅಂದಾಜು ಒಂದೂವರೆ ಕೋಟಿ ಜನ ಈ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ‌ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪಂಚಗ್ಯಾರಂಟಿ ಯೋಜನೆ ಜಾರಿಯಿಂದಾಗಿ ರಾಜ್ಯದಲ್ಲಿ ಆದಂತಹ ಬದಲಾವಣೆ ಕುರಿತು ಮಾಹಿತಿಯನ್ನು ವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಗಣೇಶ ಹುಕ್ಕೇರಿ, ಗ್ಯಾರಂಟಿ ಯೋಜನೆಗಳ‌ ಪ್ರಾಧಿಕಾರದ ಜಿಲ್ಲಾ‌ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ‌ ಲಕ್ಷ್ಮಣರಾವ್ ಚಿಂಗಳೆ, ಕಾಡಾ ಅಧ್ಯಕ್ಷರಾದ ಯುವರಾಜ‌ ಕದಂ, ವಾ.ಕ.ರ.ಸಾ.ಸಂ ಉಪಾಧ್ಯಕ್ಷರಾದ ಸುನೀಲ‌ ಹನುಮಣ್ಣವರ, ಜಿಲ್ಲಾ‌ ಹಾಗೂ ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನೆಗಳ‌ ಪ್ರಾಧಿಕಾರದ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರಾದ ಎಂ.ಎನ್.ಚೇತನಕುಮಾರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೆಶಕರಾದ ಮಲ್ಲಿಕಾರ್ಜುನ, ವಾ.ಕ.ರ.ಸಾ.ಸಂ ಬೆಳಗಾವಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ರಲ್.ಗುಡೆನ್ನವರ, ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ, ಹು.ವಿ.ಸ.ಕಂ. ಅಧೀಕ್ಕಷ ಇಂಜಿನಿಯರ ಪ್ರವೀಣಕುಮಾರ ಚಿಕಡೆ, ಜಿಲ್ಲಾ ಉದ್ಯೊಗ ವಿನಿಮಯ‌ ಕೇಂದ್ರದ ಸಹಾಯಕ ನಿರ್ದೆಶಕ ಗುರುಪಾದಯ್ಯ ಹಿರೇಮಠ, ಜಿಲ್ಲಾ‌ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಜೇಶ ಚಿಕ್ಕಮಠ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳ‌ ಮಾಹಿತಿಯುಳ್ಳ ಯಶೋಗಾಥೆ ಕೈಪಿಡಿಯನ್ನು ಬಿಡುಗಡೆ ಹಾಗೂ ಪಂಚಗ್ಯಾರಂಟಿ ಯೋಜನೆ ಜಾರಿಯಿಂದಾಗಿ ಆದಂತಹ ಪ್ರಯೋಜನೆಗಳ ಕುರಿತು ಫಲಾನುಭವಿಗಳು ತಮ್ಮ‌ ಅನಿಸಿಕೆಗಳನ್ನು ಹಂಚಿಕೊಂಡರು.

IMG 20251130 WA0026 - IMG 20251130 WA0026

ಕಾರ್ಯಕ್ರಮಕ್ಕೂ ಮುನ್ನ ನಗರದ ಕ್ರಾಂತವೀರ ಸಂಗೋಳ್ಳಿ‌ ರಾಯಣ್ಣ ವೃತ್ತದಿಂದ
ಕುಮಾರ ಗಂಧರ್ವ ರಂಗಂಮದಿರದವರೆಗೆ ಪೂರ್ಣಕುಂಬ ಮೇಳ‌ ಜಾಥಾ ಜರುಗಿತು.

Leave a Reply

Your email address will not be published. Required fields are marked *

error: Content is protected !!