ಬೆಳಗಾವಿ-23 : ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮದಲ್ಲಿ ರೈತರ ಬೆಳೆ ಹಾನಿ ಪರಿಹಾರ ನೀಡುವಂತೆ ಆಗ್ರಹಿಸಿ ರೈತರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನೇತ್ರತ್ವದಲ್ಲಿ ಆರ್ ಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಮಂಗಳವಾರ ಮರಿಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳು ಇದ್ದು, ಇಲ್ಲಿರುವ ಗ್ರಾಮಸ್ಥರು ಕೃಷಿಯ ಮೇಲೆ ಅವಲಂಬಿತರಾಗಿ ನಮ್ಮ ಜೀವನ ಸಾಗಿಸುತ್ರಿದ್ದೆವೆ ಆದರೆ, ಕಳೆದ ಭಾರಿ ಹಾಗೂ ಈ ಬಾರಿ ವಿಪರೀತ ಮಳೆಯಿಂದಾಗಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಸರಕಾರ ಬೆಳೆ ಹಾನಿ ವೀಕ್ಷಣೆ ಮಾಡಿಕೊಂಡು 2025-26 ನೇ ಸಾಲಿನ ಬೆಳೆ ಹಾನಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಅದರಲ್ಲಿ 228 ರೈತರಿಗೆ ಮಾತ್ರ ಪರಿಹಾರ ನೀಡಲಾಗಿದೆ, ಇನ್ನುಳಿದ ರೈತರಿಗೆ ಇದು ವರೆಗೆ ಯಾವುದೇ ಪರಿಹಾರ ನೀಡಿದೆ ಇರುವುದರಿಂದ ಸರಕಾರ ರೈತರಿಗೆ ಮಲತಾಯಿ ಧೋರಣೆ ತೋರಿಸಿದ್ದಾರೆಂದು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಮರಿಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲ ರೈತಾಪಿ ವರ್ಗಕ್ಕೆ ಕೂಡಲೆ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಪ್ರತಿಭಟನೆಯ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿಮಾಡಿಕೊಂಡರು.
ಶೀಘ್ರ ರೈತರ ಬೆಳೆಗಳಿಗೆ ಪರಿಹಾರ ನೀಡದೆ ಇದ್ದಲ್ಲಿ ರಾಜಾಧ್ಯಂತ ಸರಕಾರ ವಿರುದ್ದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ಕರವೇ ರಾಜ್ಯ ಸಂಚಾಲಕರು ಸುರೇಶ ಗವನ್ನವರ, ಗಣೇಶ ರೋಕಡೆ, ರುದ್ರಗೌಡ ಪಾಟೀಲ, ಹಲವು ರೈತಾಪಿ ವರ್ಗವು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
