29/01/2026
IMG-20260117-WA0001

ಬೆಳಗಾವಿ-17::ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.

ಸಂಪುಟ ಸಹದ್ಯೋಗಿಗಳಾದ ಮಾನ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರದ ಸಚಿವರಾದ ಈಶ್ವರ್ ಖಂಡ್ರೆ ಅವರ ತಂದೆಯವರಾದ ಡಾ. ಭೀಮಣ್ಣ ಖಂಡ್ರೆ ಅವರು, ನಮ್ಮ ಸಮಾಜದ ಹಿರಿಯ ಮುಖಂಡರಾಗಿದ್ದರು. ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು ಎಂದು ಹೇಳಿದ್ದಾರೆ.

ಡಾ. ಭೀಮಣ್ಣ ಅವರು ಹೈದ್ರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ, ದೇಶದ ಸ್ವಾತಂತ್ರ್ಯ ಮುಂತಾದ ಪ್ರಮುಖ ಚಳುವಳಿಗಳಲ್ಲಿ ತೊಡಗಿಸಿಕೊಂಡು, ಶರಣ ಶ್ರೇಷ್ಠರಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಗೆ ತಮ್ಮದೇ ಆದ ಕೊಡುಗೆ ನೀಡಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅವರ ಸೇವೆ ಅಪಾರವಾಗಿತ್ತು ಎಂದು ಸ್ಮರಿಸಿದ್ದಾರೆ.

ಈ ಸಮಯದಲ್ಲಿ ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಖಂಡ್ರೆ ಕುಟುಂಬಸ್ಥರಿಗೆ ಅಗಲಿಕೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!