29/01/2026
IMG-20260123-WA0000

ಬೆಳಗಾವಿ-23 : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಅನುಲಕ್ಷ್ಮಿಸಿ ಬಹಳಷ್ಟು ಜನರು ಅನ್ಯ ಪಕ್ಷಗಳಿಂದ ಕಾಂಗ್ರೆಸ್ ನತ್ತ ಹೆಜ್ಜೆ ಹಾಕುತ್ತಿದ್ದಾರೆ.

ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದಾಗಿ ಕ್ಷೇತ್ರ ಹೊಸ ದಿಕ್ಕಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧ ಭಾಗಗಳ ಬೇರೆ ಬೇರೆ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದತ್ತ ಒಲವು ತೋರಿಸುತ್ತಿದ್ದಾರೆ.

ಬುಧವಾರ ರಾಜಹಂಸಗಡ ಗ್ರಾಮದ ಸುಮಾರು 50ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ನಿಲುವುಗಳನ್ನು ಕಂಡು ಅನ್ಯ ಪಕ್ಷದವರು ಕಾಂಗ್ರೆಸ್ ಸೇರುತ್ತಿದ್ದಾರೆ. ಯಾವುದೇ ರಾಜಕೀಯವಿಲ್ಲದೆ ಇಡೀ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದೇನೆ. ‘ಮಾದರಿ ಬೆಳಗಾವಿ ಗ್ರಾಮೀಣ ಕ್ಷೇತ್ರ’ ನಿರ್ಮಾಣದ ನನ್ನ ಸಂಕಲ್ಪವನ್ನು ಪುನರುಚ್ಛಸುತ್ತೇನೆ. ಯಾವುದೇ ಷರತ್ತಿಲ್ಲದೇ, ಕಾಂಗ್ರೆಸ್ ತತ್ವ, ಸಿದ್ಧಾಂತದಲ್ಲಿ ವಿಶ್ವಾಸವಿಟ್ಟು ಬರುವವರಿಗೆ ಸದಾ ಸ್ವಾಗತ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!