ಬೆಳಗಾವಿ-23:ಗುರುವಾರ ನಡೆದ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದ ಮಹಿಳೆಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಮತ್ತು ಕಿರುಕುಳ ನೀಡುತ್ತಿರುವ ಫೈನಾನ್ಸನವರ ಅನುಮತಿ ರದ್ಧತಿಗೆ ಆಗ್ರಹಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಬೆಳಗಾವಿ ಡಿಸಿ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತು ಬೆಳಗಿನ ಜಾವವೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು, ಮೈಕ್ರೋ ಫೈನಾನ್ಸ್’ಗಳ ದಬ್ಬಾಳಿಕೆಗೆ ಸಾಕ್ಷಿಯಾಗಿದೆ. ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು. ಅಲ್ಲದೇ, ತಹಶೀಲ್ದಾರರು ಮೈಕ್ರೋ ಫೈನಾನ್ಸನವರ ಸಭೆಯನ್ನು ಕರೆದು ತಾಕೀತು ನೀಡಬೇಕು. ಅದರಂತೆ ಬೆಳಗಾವಿಯಿಂದ ಬೆಂಡಿಗೇರಿ ಬಸ್ಸಿನ ಸಮಸ್ಯೆ ಹೆಚ್ಚಾಗಿದೆ. ರಾತ್ರಿಯ ವೇಳೆ ಮಹಿಳೆಯರಿಗೆ ಇದರಿಂದ ಅಸುರಕ್ಷತೆ ಕಾಡುತ್ತಿದೆ. ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಶಾ ಜೂಟದಾರ ಆಗ್ರಹಿಸಿದರು. ಬೈಟ್
2025 ರಲ್ಲಿ ಸುಗ್ರಿವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್’ನವರ ಕಿರುಕುಳ ತಪ್ಪಿಸಲು ಸಿಎಂ ಸಿದ್ಧರಾಮಯ್ಯನವರ ಸರ್ಕಾರ ಕಾನೂನು ಜಾರಿಗೊಳಿಸಿದರೂ ಕೂಡ ರೈತ ಮಹಿಳೆಯರ ಆತ್ಮಹತ್ಯೆಗಳು ನಿಲ್ಲದಾಗಿವೆ. ಜಿಲ್ಲೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮಹಿಳೆಯರು ಫೈನಾನ್ಸ್’ನವರ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ದಿನ ಬೈಲಹೊಂಗಲದಲ್ಲಿ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡರೂ ಕ್ಯಾರೆ ಎನ್ನದ ಬೆಳಗಾವಿ ಜಿಲ್ಲಾಡಳಿತ ಇದೆಯೋ ಸತ್ತಿದೆಯೋ ಎಂದು ಪ್ರಶ್ನಿಸಿದರು. ಜಿಲ್ಲಾಧಿಕಾರಿಗಳು ವರಿಷ್ಠಾಧಿಕಾರಿಗಳನ್ನೊಳಗೊಂಡು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಿರುಕುಳ ನೀಡಿದ ಫೈನಾನ್ಸ್’ನವರ ಅನುಮತಿ ರದ್ಧು ಮಾಡಬೇಕೆಂದು ರಾಜ್ಯ ಕಾರ್ಯದರ್ಶಿ ಕಿಶನ್ ನಂದಿ ಆಗ್ರಹಿಸಿದರು.
ನಂತರ ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
