ಬೆಳಗಾವಿ-15: ಮಹಾ ಶಿವರಾತ್ರಿಯ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬದ ಸಮೇತ ‘ದಕ್ಷಿಣ ಕಾಶಿ’ ಖ್ಯಾತಿಯ ಬೆಳಗಾವಿಯ ಶ್ರೀ ಕಪಿಲೇಶ್ವರ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಆ ಪರಶಿವನು ನಾಡಿನ ಸಮಸ್ತ ಜನರಿಗೂ ಸುಖ-ಶಾಂತಿ, ಸಮೃದ್ಧಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಕುಟುಂಬಸ್ಥರು ಉಪಸ್ಥಿರಿದ್ದರು.
