01/05/2026
IMG-20260219-WA0003

ಬೆಳಗಾವಿ-19 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಹಾಗೂ ಬೆನಕನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಗುರುವಾರ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.

ಸುಮಾರು 30 ಲಕ್ಷ ರೂ,ಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ, ಜನರ ಬಹುದಿನದ ಬೇಡಿಕೆಯಾಗಿದ್ದ ಈ ಸೇತುವೆ ನಿರ್ಮಾಣದಿಂದ ಸಂಚಾರ ವ್ಯವಸ್ಥೆ ಸುಗಮವಾಗಲಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಬಾಳು ದೇಸೂರಕರ್, ಎನ್.ಕೆ.ಪಾಟೀಲ, ಮಹೇಶ್ ಕೋಲಕಾರ್, ಬೋಸ್ಲೆ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

error: Content is protected !!