ಬೆಳಗಾವಿ-09:ಬೆಳಗಾವಿಯ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಬಾಲ್ಯ ವಿವಾಹ ನಿಷೇಧ ಮತ್ತು ಬಾಲ ಕಾರ್ಮಿಕ ನಿಷೇಧ ಕಾನೂನು ಜಾಗೃತಿ ಕುರಿತು ಕೆ.ಎಲ್.ಎಸ್. ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ, ಜಿಲ್ಲಾಧಿಕಾರಿ ಮೊಹಮ್ಮದ ರೂಷನ್. ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬರಾವ್, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತಕುಮಾರ, ಪ್ರಾಚಾರ್ಯ ಅಶೋಕ ಸಿಂದಗಿ, ಮುಖ್ಯೋಪಾಧ್ಯಯ ಲಕ್ಷ್ಮಿರಿಂ A ದೇಶಪಾಂಡೆ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ಅರಿವು ಮೂಡಿಸುವ ಜಾಹೀರಾತು ಫಲಕಗಳನ್ನು ಬಿಡುಗಡೆ ಮಾಡಲಾಯಿತು.
ಬಳಿಕ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ, ಮಕ್ಕಳ ಬದುಕಿನ ಹಕ್ಕು ಸಂರಕ್ಷಿಸಿ ಉತ್ತಮ ನಾಗಕರಿಕರನ್ನಾಗಿ ಸೃಷ್ಟಿಸುವುದು ಪ್ರತಿಯೊಬ್ಬರ ನಾಗರಿಕರ ಆದ್ಯ ಕರ್ತ ವ್ಯವಾಗಿದೆ. ಮಕ್ಕಳಲ್ಲಿ ಸರಿ ತಪ್ಪುಗಳ ಬಗ್ಗೆ ಸೂಕ್ತ ತಿಳುವಳಿಕೆ ಮೂಡಿಸಿ ಅನ್ಯಾಯವನ್ನು ಪ್ರತಿರೋಧಿಸುವ ಧೈರ್ಯ ತುಂಬಬೇಕು. ಶೈಕ್ಷಣಿಕ ವಲಯ, ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ಸೇರಿದಂತೆ ವಿವಿಧ ಇಲಾಖೆಗಳು ಮಕ್ಕಳ ಬದುಕಿನ ಹಕ್ಕುಗಳ ಸಂರಕ್ಷಣೆಯಲ್ಲಿ ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳು ಗುರು ಹಿರಿಯರಿಗೆ ಗೌರವ, ಕಾಯ್ದೆ ಕಾನೂನುಗಳ ತಿಳುವಳಿಕೆ ಮತ್ತು ಸಾಮಾಜಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ತಿಳಿಸಿದರು.
ನ್ಯಾಯಾಧೀಶ ಮಂಜುನಾಥ ನಾಯಕ, ಕಾಯ್ದೆಗಳ ಮೂಲಕ ಮಕ್ಕಳ ಹಕ್ಕುಗಳ ಸಂರಕ್ಷಣೆ ಮತ್ತು ಅವರಾಧಗಳ ತಡೆಗಟ್ಟುವಿಕೆ ನಡೆಯಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, “ಮಕ್ಕಳಲ್ಲಿ ತಮ್ಮ ಹಕ್ಕುಗಳ ಬಗ್ಗೆ, ಅರಿವು ಇದ್ದಾಗ ಅವುಗಳ ಸಂರಕ್ಷಣೆ ಸಾಧ್ಯವಿದೆ. ಹಕ್ಕುಗಳ ಜಾಗೃತಿ ಇದ್ದರೆ ಬೇರೆಯವರ ಹಕ್ಕುಗಳ ಸಂರಕ್ಷಣೆಗೂ ಅನುಕೂಲವಾಗುತ್ತದೆ. ಶಿಕ್ಷಣ ಹಾಗೂ ವ್ಯವಾಹಿಕ ಜೀವನದ ಸೂಕ್ತ ಮಾಹಿತಿ ಮಕ್ಕಳಲ್ಲಿದ್ದರೆ ಭಾವಿ ಜೀವನ ಸುಗಮವಾಗಿ ಸಾಗಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.
