23/03/2026
IMG-20260321-WA0000

ಬೆಳಗಾವಿ-21 : ಕುಂದಾನಗರಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ, ಈದ್ ಉಲ್ ಫಿತರ್ ಹಬ್ಬವನ್ನು ಭಕ್ತಿಭಾವದಿಂದ ಮತ್ತು ಸಡಗರದಿಂದ ಆಚರಿಸಲಾಯಿತು. ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ವಿಶೇಷ ನಮಾಜ್ ಮಾಡುವುದರ ಮೂಲಕ ಮುಸ್ಲಿಂ ಸಪ್ರಾದಾಯದ ಪ್ರಕಾರ ದೇವರಲ್ಲಿ ಪ್ರಾರ್ಥನೆ ಮಾಡಿ ಶಾಂತಿ, ಸಮೃದ್ಧಿಗಾಗಿ ಬೇಡಿಕೊಂಡರು.
ಶನಿವಾರ ಹಬ್ಬದ ಸಂಭ್ರಮದಲ್ಲಿ ಮುಸ್ಲಿಂ ಸಮುದಾಯದವರು ಒಬ್ಬರಿಗೊಬ್ಬರು ಅಪ್ಪಿಕೊಳ್ಳುತ್ತಾ “ಈದ್ ಮುಬಾರಕ್”ಎಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಹಬ್ಬದ ಸಂತೋಷವನ್ನು ಹಂಚಿಕೊಂಡರು. ಮನೆಮನೆಗಳಲ್ಲಿ ಸಾಂಪ್ರದಾಯಿಕ ತಿಂಡಿಗಳನ್ನು ತಯಾರಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಪ್ ಸೇಠ್ ಅವರಿಗೆ ನಮಾಜ ಮಾಡುವುದುರ ಮೂಲಕ ಹಬ್ಬದಲ್ಲಿ ಬಾಗಿಯಾಗಿದ್ದರು, ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ನಗರದಲ್ಲಿ ಈದ್ ಹಬ್ಬ ಶಾಂತಿಯುತವಾಗಿ ನಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಸೂಕ್ತ ಬಂದೂಬಸ್ತ್ ಪೊಲೀಸರು ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!