10/05/2026
IMG-20260325-WA0002

ಬೆಳಗಾವಿ-25: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಿಎಸ್ಎಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ನಡೆದ ಈ ಪ್ರತಿಭಟನೆಗೆ ರಾಜ್ಯಾಧ್ಯಕ್ಷ ರಮೇಶ್ ಹರಿಜನ ನೇತೃತ್ವ ನೀಡಿದರು. ಉದ್ಯೋಗ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಎಡಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ನಿಲ್ಲಿಸಿ, ಕನಿಷ್ಠ 6% ಒಳಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು. ಇದೇ ತಿಂಗಳ 27 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಂಬಂಧಿತ ಮಸೂದೆ ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.
ಒಳಮೀಸಲಾತಿ ಜಾರಿಯಾಗದಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಮುಂದಿನ ದಿನಗಳಲ್ಲಿ ಅವರ ನಿವಾಸದ ಎದುರು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!