ಬೆಳಗಾವಿ-10:ಜೀತ ಪದ್ಧತಿ ನಿರ್ಮೂಲನಾ ದಿನ ಅಂಗವಾಗಿ ನಗರದಲ್ಲಿ ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ಸ್ವೀಕಾರ ಹಾಗೂ ಜಾಥಾ ಕಾರ್ಯಕ್ರಮ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು
ಬೆಳಗಾವಿ ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಈ ಜಾಥಾ ಹಮ್ಮಿಕೊಂಡಿದ್ದು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಸ್ಪಂದನ ಸಂಸ್ಥೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿತು.
ಜೀತ ಪದ್ದತಿಯನ್ನು ನಿರ್ಮೂಲನೆ ಮಾಡಲು ಕೈ ಜೋಡಿಸಿ ಮತ್ತು ನಾನು ಜೀತ ಪದ್ಧತಿಯನ್ನು ಕೊನೆಗೊಳಿಸುತ್ತೇನೆ ಎಂದು ಘೋಷಣೆ ಹಾಕಿದರು.