ಬೆಳಗಾವಿ-10:ಪ್ರತಿ ವರ್ಷದಂತೆ, ಈ ವರ್ಷವೂ ಜಿ.ಎಸ್.ಎಸ್. ಪಿಯು ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿ ಯಶಸ್ಸನ್ನು ಸಾಧಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ, ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರಾಚಾರ್ಯರ ಉಸ್ತುವಾರಿಯಲ್ಲಿ ವಿಶೇಷ ಶಿಕ್ಷಕರ ತಂಡದ ಮೂಲಕ ವಿಶೇಷ ಸಿದ್ಧತೆ/ತರಬೇತಿಯನ್ನು ಮಾಡಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಅಂಕಗಳನ್ನು ವೃದ್ಧಿಸಲು ಬಹಳಷ್ಟು ಪ್ರಯೋಜನವಾಗುತ್ತಿದೆ. ಈ ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದಲೂ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ.
ಈ ಕಾರ್ಯದಲ್ಲಿ ಪ್ರಾಧ್ಯಾಪಕ ವರ್ಗದವರ ಕೊಡುಗೆಯೂ ಅಪಾರವಾಗಿದೆ. ಈ ಸಂಪೂರ್ಣ ಪ್ರಕ್ರಿಯೆಯ ಉತ್ತಮ ಪ್ರಭಾವವು ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ.
ಈ ವರ್ಷವೂ ವಿದ್ಯಾರ್ಥಿ ಸಮೂಹವು ತಮ್ಮ ಗುರಿಯನ್ನು ಮುಟ್ಟಿ ಪರೀಕ್ಷೆಯಲ್ಲಿ ಉತ್ತಮ ಪ್ರಗತಿಯನ್ನು ತೋರಿದ್ದಾರೆ. ಈ ಎಲ್ಲಾ ಯಶಸ್ವಿ ವಿದ್ಯಾರ್ಥಿಗಳನ್ನು ಎಸ್.ಕೆ.ಇ. (SKE) ಸೊಸೈಟಿಯ ಅಧ್ಯಕ್ಷರಾದ ಡಾ. ಶ್ರೀ ಕಿರಣ್ ಜಿ. ಠಾಕೂರ್, ಉಪಾಧ್ಯಕ್ಷರಾದ ಶ್ರೀ ಎಸ್. ವೈ. ಪ್ರಭು, ಇತರ ಸದಸ್ಯರು, ಪ್ರಾಚಾರ್ಯರು ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಶುಭಾಶಯಗಳನ್ನು ಸಹ ಕೋರಲಾಗಿದೆ.
