03/05/2026

ಬೆಳಗಾವಿ-02 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್
ಅವರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸೇರಿ ಉದ್ಘಾಟಿಸಿದರು.
ರಾಜ್ಯಾದ್ಯಂತ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಲ್ಪಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂಕಲ್ಪದ ಭಾಗವಾಗಿ ಮುತಗಾದಲ್ಲಿ ನೂತನ ಕಟ್ಟಡ ನಿರ್ಮಾಣವಾಗಿದೆ.
ಶುಕ್ರವಾರ ಕಟ್ಟಡವನ್ನು ಉದ್ಘಾಟಿಸಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!