
ಬೆಳಗಾವಿ-04: ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಸಾಧಿಸಿದ ಜಯಕ್ಕೆ ಬೆಳಗಾವಿ ಬಿಜೆಪಿಯ ದಕ್ಷಿಣ ಹಾಗೂ ಉತ್ತರ ದಲ್ಲಿ ಮತ ಕ್ಷೇತ್ರ ವತಿಯಿಂದ ನಗರದಲ್ಲಿ ಸಂಭ್ರಮದ ವಿಜಯೋತ್ಸವ ಆಚರಿಸಿ ಸಂಭ್ರಮವನ್ನು ವ್ಯಕ್ತಪಡಿಸಿದರು.
ಸೋಮವಾರ ಪಂಚ ರಾಜ್ಯಗಳಲ್ಲಿ ಬಿಜಿಪಿ ಜಯ ಸಾಧಿಸಿರುವ ಹಿನ್ನೇಲೆಯಲ್ಲಿ ವಿಜಯೋತ್ಸವವನ್ನು ಬೆಳಗಾವಿ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ ಬಳಿಕ ಕಾರ್ಯಕರ್ತರಿಂದ ನಗರಾಧ್ಯಂತ ಬೃಹತ್ ಬೈಕ್ ರ್ಯಾ ಲಿ ಆಯೋಜಿಸಿದರು.
ಬೈಕ್ ರ್ಯಾ ಲಿ ಬಳಿಕ ಪಂತರಾಜ್ಯಗಳಲ್ಲಿ ಬಿಜೆಪಿ ಗೆಲ್ಲುವಿನ ಬಗ್ಗೆ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಅನೀಲ್ ಬೆಣಕೆ ಅವರು, ಬಿಜೆಪಿಯೂ ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ. ಬಿಜೆಪಿಗೆ ಜನಾದೇಶ ನೀಡಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಇದೇ ವೇಳೆ ಬಿಜೆಪಿ ನಗರಾಧ್ಯಕ್ಷೆ ಗೀತಾ ಸುತಾರ್ ಮಾತನಾಡಿ, ಪಶ್ಚಿಮ ಬಂಗಾಳದ ಐತಿಹಾಸಿಕ ವಿಜಯಕ್ಕೆ ಇಡೀ ಬಿಜೆಪಿ ಕಾರ್ಯಕರ್ತರಿಗೆ ಸಂತೋಷ ವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಪಂಚರಾಜ್ಯ ಚುನಾವಣೆಯಲ್ಲಿ ಮಾಜಿ ಪಿಎಂ ಅಟಲ್ ಬಿಹಾರಿ ವಾಜಪೇಯಿ ಅವರು ಕಂಡ ಕನಸು ನನಸಾಗುತ್ತಿದೆ ಎಂದರು.
ಇದೇ ವೇಳೆ ಮತ್ತೋರ್ವ ಮುಖಂಡ ಡಾ. ರವಿ ಪಾಟೀಲ್ ಅವರು ಮಾತನಾಡಿ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪಾಂಡಿಚೇರಿಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದು, ಸಂತಸ ತಂದಿದೆ. ಪಶ್ಚಿಮ ಬಂಗಾಳದಲ್ಲಿನ ಅತ್ಯಾಚಾರವನ್ನು ನಿಲ್ಲಿಸಲು ಪಿಎಂ ಮೋದಿ ಮತ್ತು ಅಮೀತ್ ಶಾ ನೇತೃತ್ವದಲ್ಲಿ ಬಿಜೆಪಿ ಚುಕ್ಕಾಣಿಯನ್ನು ಹಿಡಿದಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.
ಬಳಿಕ ಮುರುಘಂದ್ರಗೌಡ ಪಾಟೀಲ್ ಅವರು ಮಾತನಾಡಿ, ಪಂಚ ರಾಜ್ಯ ಚುನಾವಣೆಯಲ್ಲಿ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸಿದ್ದು, ಮಾಜಿ ಪಿಎಂ ಅಟಲ್ ಬಿಹಾರಿ ವಾಜಪೇಯಿ ಅವರು ನೀಡಿದ ಸಂದೇಶ ಸತ್ಯವಾಗುತ್ತಿದೆ ಎಂದರು.
ಈ ವೇಳೆ ಚುನಾಯಿತ ಜನಪ್ರತಿನಿಧಿಗಳು, ಪದಾಧಿಕಾರಿಗಳು, ಬಿಜಿಪಿ ಮುಖಂಡರುಗಳು, ಕಾರ್ಯಕರ್ತರು ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
