05/05/2026

ಬೆಳಗಾವಿ-05: ಇಡೀ ರಾಜ್ಯದ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ಹಿರಿಯ ನಾಯಕ ವೀರಣ್ಣ ಚರಂತಿಮಠ ಅವರ ವಿರುದ್ಧ 21,866 ಮತಗಳ ಬೃಹತ್ ಅಂತರದಿಂದ ಜಯಭೇರಿ ಬಾರಿಸಿದ್ದು, ದಾವಣಗೆರಿಯಲ್ಲಿ ಸಮರ್ಥ ಶಾಮನೂರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಬೆಳಗಾವಿಯ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ವಿಜಯೋತ್ಸವ ಆಚರಿಸಿದರು.

ಬೆಳಗಾವಿಯ ಕಾಂಗ್ರೆಸ್‌ ಕಚೇರಿ ಎದುರು ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಗುಲಾಲ್ ಎರಚಿ ಸಂಭ್ರಮಿಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಸತೀಶ್‌ ಜಾರಕಿಹೊಳಿ ಪರ ಘೋಷಣೆಗಳನ್ನು ಕೂಗುವ ಮೂಲಕ ಜಯಭೇರಿಯನ್ನು ಆಚರಿಸಿದರು. ಅಲ್ಲೇ ನೆರೆದಿದ್ದ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಕಾರ್ಯಕರ್ತರು ತಮ್ಮ ಸಂತೋಷವನ್ನು ಹಂಚಿಕೊಂಡರು.

ಬಾಗಲಕೋಟೆಯಲ್ಲಿ ಲಭಿಸಿದ ಈ ಬೃಹತ್ ಅಂತರದ ಗೆಲುವು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಬಲವನ್ನು ತೋರಿಸುತ್ತದೆ ಎಂದು ಈ ಸಂದರ್ಭದಲ್ಲಿ ಹಿರಿಯ ಮುಖಂಡರು ಅಭಿಪ್ರಾಯಪಟ್ಟರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಆಪ್ತ ಸಹಾಯಕರಾದ ಮಲಗೌಡ ಪಾಟೀಲ್ ಅವರು ಮಾತನಾಡಿ,

ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು, ಪ್ರಚಾರ ನಡೆಸಿ ಬಳಿಕ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ‌. ಈ ಫಲಿತಾಂಶ ಮುಂದಿನ ಚುನಾವಣಾ ದಿಕ್ಸೂಚಿಯಾಗಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗದುಕೊಂಡು ಸಚಿವ ಸತೀಶ ಜಾರಕಿಹೊಳಿ ತಿಂಗಳ ಕಾಲ ಬಾಗಲಕೋಟೆಯಲ್ಲಿ ನಿರಂತರ ಪ್ರಚಾರ ನಡೆಸಿದ ಫಲದಿಂದ ಮೇಟಿ ಅವರು ಬಹುಮತ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ತಳಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲಾಗಿದೆ. ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಆಗಿರುವುದು ಬಹಳಷ್ಟು ಸಂಸತವಾಗಿದೆ‌. ಗ್ಯಾರಂಟಿ ಯೋಜನೆ ಈ ಗೆಲುವಿಗೆ ಕಾರಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಮಲಗೌಡ ಪಾಟೀಲ್,
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ಬಾ ನಾವಲಗಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಎಂ.ಜೆ, ರಮೇಶ ಸೊಂಟಕ್ಕಿ, ಮಂಜು ಕಾಂಬಳೆ, ಸಂತೋಷ ಕಾಂಬಳೆ, ಬಸವರಾಜ ಶೇಂಗಾವಿ, ರಾಜಾ ಸಲೀಂ ಸೇರಿದಂತೆ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!