
ಬೆಳಗಾವಿ-09: ಹಿಂಡಲಗಾ ಗ್ರಾಮದ ಶ್ರೀರಾಮ ಕಾಲೋನಿಯಲ್ಲಿ ಸುಮಾರು 45 ಲಕ್ಷ ರೂ.ಗಳ ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು.
ಗ್ರಾಮೀಣ ಕ್ಷೇತ್ರದಲ್ಲಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂಕಲ್ಪದಂತೆ ಈ ಎಲ್ಲ ಕಾಮಗಾರಿಗಳು ನಡೆಯುತ್ತಿವೆ ಎಂದು ಮೃಣಾಲ್ ಹೆಬ್ಬಾಳಕರ್ ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಕಾಲೋನಿಯ ನಿವಾಸಿಗಳು ಹಾಜರಿದ್ದರು.
