

.
ಬೆಳಗಾವಿ-13 : ಸರ್ಕಾರಿ ಜಾಗೆ ಅತಿಕ್ರಮಣ ಖಂಡಿಸಿ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ವಸತಿ ಶಾಲೆ ಮುಂಭಾಗದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಮಹಾನಗರ ಪಾಲಿಕೆಯ ಉಪಮಹಾಪೌರ ಹಣಮಂತ ಕೊಂಗಾಲಿ ಅವರ ನೇತ್ರದಲ್ಲಿ ಪ್ರತಿಭಟನೆ ನಡೆಸಿದರು.
ಮಂಗಳವಾರ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಮುಂಭಾಗದಲ್ಲಿರುವ ಸರ್ಕಾರಿ ಜಾಗೆಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ಆರೋಪಿಸಿದ ರಾಮತೀರ್ಥ ನಗರದ ನಿವಾಸಿಗಳು, ಹಾಗೂ ವಿವಿಧ ಸಂಘಟನೆಗಳು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಅತಿಕ್ರಮಣ ಮಾಡಿಕೊಂಡಿರುವ ಜಾಗೆಯಲ್ಲಿ ನಿರ್ಮಿಸಲಾಗಿದೆ ಕಡ್ಡೆಗೊಡೆಯನ್ನು ಜೆಸಿಬಿ ಮೂಲಕ ತೆರವುಗೊಳಿಸಿದರು.
ಸ್ಥಳೀಯರ ಆರೋಪದ ಪ್ರಕಾರ, ಹಾಸ್ಟೆಲ್ ಮುಂಭಾಗದಲ್ಲಿ ಕೇವಲ 09 ಅಡಿಯಷ್ಟು ಜಾಗೆ ಮಾತ್ರ ಇಲಾಖೆಗೆ ಸೇರಿದ್ದು, ಅದರಾಚೆಗೆ ರಸ್ತೆವರೆಗೂ ಜಾಗೆಯನ್ನು ಅತಿಕ್ರಮಣ ಮಾಡಿ ಗಾರ್ಡನ್ ನಿರ್ಮಾಣ ಮಾಡಲಾಗುತ್ತಿದೆ. ಬುಡಾ ಇಲಾಖೆಗೆ ಸೇರಿದ ಜಾಗೆಯನ್ನು ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು.
ಅತಿಕ್ರಮಣ ನಡೆದಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.
ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ಬುಡಾ ಅಧಿಕಾರಿಗಳನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡು, ಸರ್ಕಾರಿ ಜಾಗೆ ಉಳಿಸುವಲ್ಲಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನವನ್ನು ಹೋರ ಹಾಕಿದರು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಈ ವೇಳೆ ಬಿಜೆಪಿ ಮಾಹಾನಗ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಒಕ್ಕುದ, ಪಾಲಿಕೆಯ ಉಪಮಾಹಾಪೌರ ಹಣಮಂತ ಕೊಂಗಾಲಿ, ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ. ವಿವಿಧ ಸಂಘಟನೆಯಗಳ ಕಾರ್ಯಕರ್ತರು, ಹಾಗೂ ಸ್ಥಳೀಯರು ಸೇರಿದಂತೆ ಇತರರು ಉಪಸ್ಥಿತರಿದ್ದರು..
