15/05/2026

ಬೆಳಗಾವಿ-13: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ್ ಗ್ರಾಮದಲ್ಲಿ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆಗಳ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಯಾವುದೇ ಕಾರಣಕ್ಕೂ ನಿಲ್ಲಬಾರದೆನ್ನುವ ಉದ್ದೇಶದಿಂದ ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡಿಸುತ್ತಿದ್ದಾರೆ.

ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!