23/12/2024
IMG-20240211-WA0001

ಬೆಳಗಾವಿ-11:ಎನ್‌ಡಿಪಿಎಸ್ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ನಿಷ್ಕ್ರಿಯಗೊಳಿಸಲಾಯಿತು.

ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ,ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 53 ಪ್ರಕರಣಗಳಲ್ಲಿ ಅಂದಾಜು ರೂ. 15.10.82, ಮೊತ್ತದ 291336 ಕೆ.ಜಿ.ಯಷ್ಟು ಮಾದಕ ವಸ್ತುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ನ್ಯಾಯಾಲಯದ ಹಾಗೂ ಮಾಲಿನ್ಯ ನಿಯಂತ್ರಣಾಧಿಕಾರಿಗಳ ಅನುಮತಿಯೊಂದಿಗೆ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿಯು ಫೆಬ್ರುವರಿ 9 ರಂದು ಶುಕ್ರವಾರ ದಂದು ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣಾ ವ್ಯಾಪಿಯ ಹಾರೂಗೊಪ್ಪ ಗ್ರಾಮ ದಿ ಬೆಲಗಾಂ ಗ್ರೀನ್ ಎನ್ವಿರಾನ್‌ಮೆಂಟಲ್ ಮ್ಯಾನೇಜ್‌ಮೆಂಟ್ ಪ್ರಾ.ಲಿ. ಹಾರೂಗೊಪ್ಪ ನೇದ್ದರಲ್ಲಿ ಮಾದಕ ವಸ್ತುಗಳನ್ನು ನಿಯಮಾನುಸಾರ ನಿಷ್ಕ್ರಿಯಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದ್ದಾರೆ.

error: Content is protected !!