ಬೆಳಗಾವಿ-11:ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿರುವ ರಾಜಶ್ರೀ ಜೈನಾಪುರೆ ಅವರು ಅಧಿಕಾರ ಸ್ವೀಕರಿಸಿದರು.
ಆಯುಕ್ತ ಅಶೋಕ ದುಡಗುಂಟಿ ಅವರನ್ನು ಚುನಾವಣೆ ಕಾರಣ ರಾಯಚೂರು ನಗರಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ರಾಜಶ್ರೀ ಜೈನಾಪುರೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜಶ್ರೀ ಜೈನಾಪುರ ಅವರು ಈ ಹಿಂದೆ ಬೆಳಗಾವಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.