ಬೆಳಗಾವಿ-26: ತಾಲೂಕಿನ ಕಡೋಲಿ ಗ್ರಾಮದ ಶ್ರೀ ಮಾತಂಗಿ ದೇವಿಯ ಮಂದಿರದ ಸ್ಲ್ಯಾಬ್ ಪೂಜಾ ಕಾರ್ಯಕ್ರಮವು ಭಾನುವಾರ ಅತ್ಯಂತ ಶ್ರದ್ಧಾ ಮತ್ತು ಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು.
ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಕೆಪಿಸಿಸಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರ ನಿರ್ದೇಶನ ಮತ್ತು ಮಾರ್ಗದರ್ಶನದಲ್ಲಿ ಈ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಜಾರಕಿಹೊಳಿ ಕುಟುಂಬವು ಮಂದಿರ ನಿರ್ಮಾಣಕ್ಕಾಗಿ ನೀಡಿರುವ 10 ಲಕ್ಷ ರೂಪಾಯಿ ವಿಶೇಷ ಅನುದಾನದಡಿ ಈ ದೇವಸ್ಥಾನದ ಕಾಮಗಾರಿ ನಡೆಯುತ್ತಿದ್ದು, ಇಂದು ಶಾಸ್ತ್ರೋಕ್ತವಾಗಿ ಸ್ಲಾಬ್ ಹಾಕುವ ಪೂಜಾ ವಿಧಿವಿಧಾನಗಳು ಜರುಗಿದವು.
ಈ ಶುಭ ಸಂದರ್ಭದಲ್ಲಿ ಸಚಿವರ ಆಪ್ತರಾದ ಮಲಗೌಡ ಪಾಟೀಲ, ದೇವಸ್ಥಾನ ಪಂಚ ಕಮಿಟಿ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಊರಿನ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
