ಹಾಸನ-27: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ದಿವಂಗತ ಚೆನ್ನಮ್ಮ ದೇವೇಗೌಡ ಅವರ ಸಮಾಧಿಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.
ಈ ವೇಳೆ ಚೆನ್ನಮ್ಮ ದೇವೇಗೌಡ ಅವರ ಸೇವಾ ಮನೋಭಾವ, ಸರಳ ವ್ಯಕ್ತಿತ್ವ ಹಾಗೂ ಕುಟುಂಬದ ಮೌಲ್ಯಗಳನ್ನು ಸ್ಮರಿಸಿದ ಯದುವೀರ್, ಅವರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ಸಲ್ಲಿಸಿದರು. ದೇವೇಗೌಡ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಂತಾಪ ಸೂಚಿಸಿ ಧೈರ್ಯ ತುಂಬಿದರು.
ಚೆನ್ನಮ್ಮ ದೇವೇಗೌಡ ಅವರ ನಿಧನದ ಬಳಿಕ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸುತ್ತಿದ್ದು, ಯದುವೀರ್ ಅವರ ಭೇಟಿಯೂ ಗೌರವ ಮತ್ತು ಶ್ರದ್ಧಾಂಜಲಿಯ ಸಂಕೇತವಾಗಿ ಗಮನ ಸೆಳೆಯಿತು.
