ಬೆಳಗಾವಿ-29: ಎಪಿಎಂಸಿ ಪೊಲೀಸ್ ಠಾಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಠಾಣೆಯ ಆಡಳಿತ ಹಾಗೂ ಕಾರ್ಯವೈಖರಿಯನ್ನು ಪರಿವೀಕ್ಷಣೆ ನಡೆಸಿದರು.
ಭೇಟಿಯ ವೇಳೆ ಠಾಣೆಯಲ್ಲಿ ಪ್ರಸ್ತುತ ತನಿಖಾ ಹಂತದಲ್ಲಿರುವ ವಿವಿಧ ಪ್ರಕರಣಗಳ ಪ್ರಗತಿಯನ್ನು ಪರಿಶೀಲಿಸಿದ ಅಧಿಕಾರಿಗಳು, ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಬಾಕಿ ಉಳಿದಿರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಥಾಣೆ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಅಪರಾಧ ತಡೆಗಟ್ಟುವಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದ ಹಿರಿಯ ಅಧಿಕಾರಿಗಳು, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸುವ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿ, ಜನಸ್ನೇಹಿ ಪೊಲೀಸ್ ಸೇವೆಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದರು.
