ಸಂಕೇಶ್ವರ(ಬೆಳಗಾವಿ)25:ಮಹಿಳೆಯೋರ್ವಳಿಗೆ ಕಿರುಕುಳ ಆರೋಪದಡಿ ಮಹಿಳೆಯ ದೂರಿನ ಮೆರೆಗೆ ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ನರಸಿಂಹರಾಜು ಜೆ. ಡಿ. ಅವರನ್ನು ಅಮಾನತು ಮಾಡಿ ಬೆಳಗಾವಿ ಜಿಲ್ಲಾ ಎಸ್‌ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ,ಅಶಿಸ್ತು ಹಾಗೂ ದುರ್ನಡೆಯನ್ನು ಆಧರಿಸಿ ಅವರನ್ನು ಅಮಾನತು ಮಾಡಲಾಗಿದೆ.
ಏನು ಇದು ಪ್ರಕರಣ:
ಸಂಕೇಶ್ವರ ಪೊಲೀಸ ಠಾಣೆಗೆ ತಮ್ಮ ಕೌಟುಂಬಿಕ ಸಮಸ್ಯೆ ಕುರಿತು ತಮ್ಮ ಪತಿಯ ವಿರುದ್ಧ ದೂರು ನೀಡಿದ್ದ ಮಹಿಳೆಯ ಜೊತೆಗೆ ಪಿಎಸ್ ಐ ನರಸಿಂಹರಾಜು ಜೆ.ಡಿ ಅಸಭ್ಯವಾಗಿ ವರ್ತಿಸಿದ್ದಾರೆ.ಅವಳ ದೂರವಾಣಿ ನಂ ಪಡೆದು ಅವಳ ಸಂಪರ್ಕ ಬೆಳೆಸಿ ಅವಳನ್ನ ಕರೆದುಕೊಂಡು ತಿರುಗಾಡಿದ್ದು,ಪಿಎಸ್ ಐ ಅವರ ವರ್ತನೆಗೆ ಬೆಸತ್ತ ಮಹಿಳೆ ನ್ಯಾಯ ಕೊಡಿಸುವಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾಳೆ.
ಮಹಿಳೆಯ ದೂರಿನನ್ವಯ ವಿಚಾರಣೆ ನಡೆಸಿದ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಪಿಎಸ್ ಐ ನರಸಿಂಹರಾಜು ಅವರನ್ನ ಕರ್ತವ್ಯ ಲೋಪ,ಮಹಿಳೆಯೊಂದಿಗೆ ದುರ್ನಡತೆ ಹಾಗು ಅಶಿಸ್ತು ಎಂದು ನರಸಿಂಹರಾಜು ಅವರನ್ನ ಅಮಾನತ್ತು ಮಾಡಿ ಆದೇಶ ಹೊರಡಿಸುರಿರುತ್ತಾರೆ ಎಂದು ತಿಳಿಸಿರುತ್ತಾರೆ.