23/12/2024
IMG-20240222-WA0002
ಬೆಳಗಾವಿ:22: ವಿದ್ಯಾರ್ಥಿ ಜೀವನವೂ ನಮ್ಮ ಜೀವನದ ಪ್ರಮುಖ ಕಾಲಘಟ್ಟವಾಗಿದ್ದು, ಪ್ರತಿಯೊಬ್ಬರು ಈ ಘಳಿಗೆಯನ್ನು ಸದ್ಬಳಕೆ ಮಾಡಿಕೊಂಡು ಎಲ್ಲರಿಗೂ ಮಾದರಿಯಾಗುವಂತೆ ಜೀವನ ರೂಪಿಸಿಕೊಳ್ಳಬೇಕು ಎಂದು ಯುವ ಮುಖಂಡ ರಾಹುಲ್ ಜಾರಕಿಹೋಳಿ ಹೇಳಿದರು.
IMG 20240221 WA0004 2 -

ನಗರದ ಬಿಮ್ಸ್‌ನಲ್ಲಿ ಗುರುವಾರ ಆಯೋಜಿಸಿದ್ದ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿಗಳ ಸ್ವಾಗತ ಹಾಗೂ ಬಿಳ್ಕೋಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಣವು ಸಮಾಜದ ಎಲ್ಲ ಕಟ್ಟಳೆಗಳನ್ನು ಮೀರಿದ್ದಾಗಿದೆ, ಶಿಕ್ಷಣ ಎನ್ನುವುದು ಹುಲಿಯ ಹಾಲಿನಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು ಎನ್ನುವಂತೆ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಜೀವನ ರೂಪಿಸಿಕೊಳ್ಳಬೇಕು ಎಂದರು

.ಈ ಸಂದರ್ಭದಲ್ಲಿ ಬಿಮ್ಸ್‌ನ ನಿರ್ದೇಶಕ ಡಾ.ಅಶೋಕಕುಮಾರ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕ ಡಾ.ಈರಣ್ಣಪಲ್ಲೆದ, ಜಿಲ್ಲಾ ಶಸ್ತ್ರಚಿಕಿತ್ಸಕ ವಿಠ್ಠಲ್ ಶಿಂಧೆ, ಅರೆವೈದ್ಯಕೀಯ ಸಂಯೋಜಕ ಡಾ.ಎಂ.ಎಸ್. ಶೇಖನ್ನವರ ಇದ್ದರು.

error: Content is protected !!