23/12/2024
IMG-20240223-WA0009

ಬೆಳಗಾವಿ -23:ಶೀಘ್ರ ಕನಿಷ್ಠ ವೇತನ ಜಾರಿ, ತಾತ್ಕಾಲಿಕ ಹುದ್ದೆಗಳನ್ನು ಖಾಯಂಗೊಳಿಸುವಂತೆ ಹಾಗೂ ಮಹಾರಾಷ್ಟ್ರ ಮಾದರಿಯಲ್ಲಿ ವಿಕಲಚೇತನರಿಗೆ ಪ್ರತ್ಯೇಕ ಸಂಸ್ಥೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶುಕ್ರವಾರ ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ವತಿಯಿಂದ ಪ್ರತಿಭಟಿಸಿ, ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.

IMG 20240221 WA0004 2 -

ಸೇವಾ ಅವಧಿಯಲ್ಲಿ ಮರಣ ಹೊಂದಿದ ವಿಕಲಚೇತನರಿಗೆ 5 ಲಕ್ಷದವರೆಗೆ ಪರಿಹಾರ, ಪುನರ್ವಸತಿ ಕಾರ್ಯಕರ್ತರಿಗೆ ಟಿ.ಎ, ಡಿ.ಎ ನೀಡಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಸೌಲಭ್ಯಗಳಲ್ಲಿ ಸಮಾನ ಮೀಸಲಾತಿ ಹಾಗೂ ಗ್ರಾಮ ಪಂಚಾಯಿತಿ ವಿವಿಧ ಹುದ್ದೆಗಳ ನೇರ ನೇಮಕಾತಿಗಳಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಯಿತು.

ರಾಜ್ಯ ಸರ್ಕಾರವು ಶೀಘ್ರವಾಗಿ ಎಲ್ಲ ಬೇಡಿಕೆಗಳನ್ನು ಘೋಷಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರತಿಭಟನೆಕಾರರು ಎಚ್ಚರಿಕೆ ನೀಡಿದ್ದಾರೆ.

ನವ ಕರ್ನಾಟಕ ವಿಕಲಚೇತನರ ಗೌರವಧನ ಸಂಘದ ಜಿಲ್ಲಾಧ್ಯಕ್ಷ ಸಂಸುದ್ದೀನ್ ಕೈರಡಿ, ಕಾರ್ಯದರ್ಶಿ ವಿಶ್ವನಾಥ ಮೋರೆ, ಗೌರವಾಧ್ಯಕ್ಷ ಶಿವಪುತ್ರಪ್ಪ ಹುಲಿಕಟ್ಟಿ, ಸೇರಿದಂತೆ.

error: Content is protected !!