ಬೆಳಗಾವಿ-28: ಸರಕಾರದ ಅಧಿಸೂಚನೆ ಹಾಗೂ ನಿಯಮಾವಳಿ ಪ್ರಕಾರ ವಾಣಿಜ್ಯ ಮಳಿಗೆಗಳು, ಅಂಗಡಿ-ಮುಂಗಟ್ಟುಗಳ ಫಲಕಗಳಲ್ಲಿ ಕನ್ನಡ ಬಳಕೆ ಮಾಡದೇ ಇರುವ ನಗರದ ಅಂಗಡಿಗಳ ಫಲಕಗಳ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಲೋಕೇಶ್ ತಿಳಿಸಿದ್ದಾರೆ.
ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡಕ್ಕೆ ಅಗ್ರ ಸ್ಥಾನ ನೀಡುವಂತೆ ಹಾಗೂ ಸಂಪೂರ್ಣ ಅನ್ಯ ಭಾಷೆಯಲ್ಲಿರುವ ಫಲಕಗಳನ್ನು ತೆರವುಗೊಳಿಸುವಂತೆ ಈಗಾಗಲೇ ನೋಟಿಸ್ ನೀಡಲಾಗಿತ್ತು.
ನೋಟಿಸ್ ಗೆ ಸರಿಯಾಗಿ ಸ್ಪಂದಿಸದೇ ಇರುವ ಅಂಗಡಿಗಳ ಫಲಕಗಳನ್ನು ಮಾತ್ರ ಇಂದು ಪಾಲಿಕೆಯ ಸಿಬ್ಬಂದಿ ತೆರವುಗೊಳಿಸಿದ್ದಾರೆ.
ಕೆಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಅವರು ತಕ್ಷಣವೇ ಫಲಕಗಳನ್ನು ಬದಲಾಯಿಸದಿದ್ದರೆ ಪಾಲಿಕೆಯೇ ಅಧಿಕಾರಿಗಳೇ ಅಂತಹ ಫಲಕಗಳನ್ನು ತೆರವುಗೊಳಿಸಿ, ಅದಕ್ಕೆ ತಗಲುವ ವೆಚ್ಚವನ್ನು ಆಯಾ ಅಂಗಡಿ ಮಾಲೀಕರಿಂದಲೇ ವಸೂಲಿ ಮಾಡಲಾಗುವುದು ಎಂದು ಆಯುಕ್ತ ಲೋಕೇಶ್ ಅವರು ತಿಳಿಸಿದ್ದಾರೆ.
ಸರಕಾರದ ಅಧಿಸೂಚನೆ ಪ್ರಕಾರ ಫಲಕಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಇದೇ ರೀತಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.